ETV Bharat / state

'ಚಳಿಗಾಲ ಅಧಿವೇಶನ ಬೆಳಗಾವಿಯಲ್ಲೇ ನಡೆಸಿ': ಚಿಕ್ಕೋಡಿಯಲ್ಲಿ ರೈತರ ಆಗ್ರಹ

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲೇ ನಡೆಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತ ಸಂಘಟನೆಗಳು ವಿವಿಧ ರೀತಿಯಲ್ಲಿ ಪ್ರತಿಭಟನೆ‌ ನಡೆಸಿದವು.

ಚಳಿಗಾಲ ಅಧಿವೇಶನ ಬೆಳಗಾವಿಯಲ್ಲೇ ನಡೆಸಲೆಂದು ಚಿಕ್ಕೋಡಿಯಲ್ಲಿ ಪ್ರತಿಭಟಸಿದ ರೈತ ಸಂಘಟನೆ
author img

By

Published : Sep 19, 2019, 9:03 PM IST

ಚಿಕ್ಕೋಡಿ : ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಬೇಕೆಂದು ಒತ್ತಾಯಿಸಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತ ಸಂಘಟನೆಗಳು ಪ್ರತಿಭಟನೆ‌ ನಡೆಸಿವೆ.

ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಒತ್ತಾಯಿಸಿ ಚಿಕ್ಕೋಡಿಯಲ್ಲಿ ರೈತರಿಂದ ಪ್ರತಿಭಟನೆ
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಲೆ ಕೆಳಗೆ ಹಾಕಿ, ಉರುಳು ಸೇವೆ ಮಾಡಿ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ರು.

'ರೈತರಿಗೆ ಸರ್ಕಾರದಿಂದ ಅನ್ಯಾಯ'

ಸರ್ಕಾರ ಸೂಕ್ತ ರೀತಿಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಿಲ್ಲ, ಪ್ರವಾಹ ಸಂತ್ರಸ್ತರಿಗೆ ನೀಡಲಾಗುವ 10 ಸಾವಿರ ರೂಪಾಯಿಗಳ ಚೆಕ್ ತಲುಪಿಲ್ಲ. ಈ ಭಾಗದ ನೀರಾವರಿ ಯೋಜನೆಗಳನ್ನು ಕೂಡಾ ಜಾರಿ ಮಾಡಿಲ್ಲ. ಜೊತೆಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಮನ್ನಾ ಮಾಡಬೇಕೆಂದು ಪ್ರತಿಭಟನಾನಿರತ ರೈತರು ಸರ್ಕಾರವನ್ನು ಒತ್ತಾಯಿಸಿದ್ರು.

ಮುಂದಿನ ತಿಂಗಳು(ಅಕ್ಟೋಬರ್) 14 ರಿಂದ 26 ರವರೆಗೆ ಬೆಂಗಳೂರಿನ ಶಕ್ತಿಸೌಧ ವಿಧಾನಸೌಧದಲ್ಲೇ ಈ ಬಾರಿಯ ಚಳಿಗಾಲದ ಅಧಿವೇಶನ ನಡೆಯಲಿದೆ.

Intro:ಚಳಿಗಾಲ ಅಧಿವೇಶನ ಬೆಳಗಾವಿಯಲ್ಲೇ ನಡೆಸಲು ಒತ್ತಾಯಿಸಿ ಚಿಕ್ಕೋಡಿಯಲ್ಲಿ ಪ್ರತಿಭಟನೆBody:

ಚಿಕ್ಕೋಡಿ :

ಚಳಿಗಾಲ ಅಧಿವೇಶನ ಬೆಳಗಾವಿಯಲ್ಲೇ ನಡೆಸಲು ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತ ಸಂಘಟನೆಗಳಿಂದ ವಿವಿಧ ರೀತಿಯಲ್ಲಿ ರೈತರು ಪ್ರತಿಭಟನೆ‌ ಮಾಡಿದರು.

ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ
ತಲೆ ಕೆಳಗೆ ಹಾಕಿ, ಉರುಳು ಸೇವೆ ಮಾಡಿ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘಟನೆಗಳು, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.

ರೈತರಿಗೆ ಸರಕಾರ ಅನ್ಯಾಯ ಮಾಡುತ್ತಿದೆ.
ಸರಿಯಾಗಿ ಬೆಳೆ ಪರಿಹಾರ ನೀಡಿಲ್ಲ, ಸಂತ್ರಸ್ಥರಿಗೆ 10 ಸಾವಿರ ರೂಪಾಯಿಗಳ ಚೆಕ್ ತಲುಪಿಲ್ಲ. ಈ ಭಾಗದ ನೀರಾವರಿ ಯೋಜನೆಗಳನ್ನು ಜಾರಿ ಮಾಡದ ಸರಕಾರ. ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾಲ ಮನ್ನಾ ಮಾಡಬೇಕು. ಹಲವು ಬೇಡಿಕೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ ರೈತ ಸಂಘಟನೆಗಳು.

ಹೆಚ್ಚಿನ ಪ್ರಮಾಣದಲ್ಲಿ ನೆರೆಯಿಂದ ಹಾನಿಗೊಳಗಾದ ಬೆಳಗಾವಿ ಜಿಲ್ಲೆ, ಹಾಗಾಗಿ ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ ನಡೆಸಲು ಒತ್ತಾಯಿಸಿದ ರೈತ ಸಂಘಟನೆಗಳು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.