ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದೆ. ಜಿಲ್ಲೆಯಲ್ಲಿ ನಾಲ್ವರಲ್ಲಿ ಮತ್ತೆ ಸೋಂಕು ದೃಢವಾಗಿದೆ. ಈ ಹಿನ್ನೆಲೆ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 38 ವರ್ಷ ವಯಸ್ಸಿನ ವ್ಯಕ್ತಿಗೆ ಸೋಂಕು ತಗುಲಿದೆ. ಹಿರೇಬಾಗೇವಾಡಿ ಗ್ರಾಮದ 128 ಸೋಂಕಿತ ವ್ಯಕ್ತಿಯಿಂದ 224 ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಇನ್ನು ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಮೂವರಲ್ಲಿ ಸೋಂಕು ದೃಢವಾಗಿದೆ.
ಕುಡಚಿಯ 150 ಸೋಂಕಿತ ವ್ಯಕ್ತಿಯಿಂದ 19 ವರ್ಷ ವಯಸ್ಸಿನ ಯುವಕ, 55 ವರ್ಷ ವಯಸ್ಸಿನ ಪುರುಷ ಹಾಗೂ 25 ವರ್ಷ ವಯಸ್ಸಿನ ಯುವಕನಿಗೆ ಕೊರೊನಾ ಸೋಂಕು ದೃಢವಾಗಿದೆ. ಸೋಂಕಿತರಾಗಿದ್ದ 128 ನೇ ವ್ಯಕ್ತಿ ಹಾಗೂ 150 ನೇ ಸೋಂಕಿತರು ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಮರ್ಕಜ್ ಮಸೀದಿಯಲ್ಲಿ ನಡೆದ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದರು.