ಬೆಳಗಾವಿ: ಜಿಲ್ಲೆಯಲ್ಲಿ ಇಂದು 293 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 4237ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನ ಜಿಲ್ಲೆಯಲ್ಲಿ ನಾಲ್ವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಬೆಳಗಾವಿಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.
ಇಂದು 52 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3013 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ಹಾಗೂ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.