ETV Bharat / state

ಶುಕ್ರವಾರದಿಂದ ಸೋಮವಾರದವರೆಗೆ ಬೆಳಗಾವಿ ಜಿಲ್ಲೆ ಸಂಪೂರ್ಣ ಲಾಕ್​ಡೌನ್ - ಶುಕ್ರವಾರದಿಂದ ಸೋಮವಾರದವರೆಗೆ ಫುಲ್​ ಲಾಕ್​ಡೌನ್ ಎಂದ ಬೆಳಗಾವಿ ಡಿಸಿ ಎಂಜಿ ಹಿರೇಮಠ,

ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿಯಲ್ಲಿ ಸಂಪೂರ್ಣ ಲಾಕ್​ಡೌನ್ ಇರಲಿದೆ ಎಂದು ಜಿಲ್ಲಾಧಿಕಾರಿ ‌ಎಂ.ಜಿ ಹಿರೇಮಠ ತಿಳಿಸಿದ್ದಾರೆ.

Friday to Monday Full lockdown, Friday to Monday Full lockdown in Belagavi, Friday to Monday Full lockdown says Belagavi DC MG Hiremath, Belagavi corona news, ಶುಕ್ರವಾರದಿಂದ ಸೋಮವಾರದವರೆಗೆ ಫುಲ್​ ಲಾಕ್​ಡೌನ್, ಬೆಳಗಾವಿಯಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಫುಲ್​ ಲಾಕ್​ಡೌನ್, ಶುಕ್ರವಾರದಿಂದ ಸೋಮವಾರದವರೆಗೆ ಫುಲ್​ ಲಾಕ್​ಡೌನ್ ಎಂದ ಬೆಳಗಾವಿ ಡಿಸಿ ಎಂಜಿ ಹಿರೇಮಠ, ಬೆಳಗಾವಿ ಕೊರೊನಾ ಸುದ್ದಿ, ​
ಶುಕ್ರವಾರದಿಂದ ಸೋಮವಾರ ಬೆಳಗ್ಗೆ 6ರವರೆಗೆ ಸಂಪೂರ್ಣ ಲಾಕ್​ಡೌನ್
author img

By

Published : Jun 3, 2021, 2:37 PM IST

ಬೆಳಗಾವಿ : ಜಿಲ್ಲೆಯಲ್ಲಿ ಕೊರೊನಾ ವೈರಸ್​ ಸೋಂಕು ಹರಡದಂತೆ ತಡೆಗಟ್ಟಲು ಶುಕ್ರವಾರ (ಜೂನ್ 4) ಬೆಳಗ್ಗೆ 6 ಗಂಟೆಯಿಂದ ಸೋಮವಾರ (ಜೂನ್ 7) ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್​ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಜೂನ್ 7 ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ...

ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್ ಫುಡ್ ಸರ್ವಿಸಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ, ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶವಿರುತ್ತದೆ. ಲಾಕ್​ಡೌನ್ ಘೋಷಿಸಿರುವ ದಿನಗಳಂದು ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕು. ಅದೇ ರೀತಿ, ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿಗಳನ್ನು ತೆರೆದು ಬೀಜ ಹಾಗೂ ರಸಗೊಬ್ಬರಗಳನ್ನು ವಿತರಿಸಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿರುತ್ತದೆ.

ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಲಾಕ್​ಡೌನ್ ದಿನಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12ಗಂಟೆಯವರೆಗೆ ತೆರೆಯಲು ಅವಕಾಶವಿದ್ದು, ಅಲ್ಲಿ ತೆರಳುವ ರೈತರು ಗ್ರಾಮ ಪಂಚಾಯತಿ ಪಿಡಿಓ ಹಾಗೂ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು. ಅಲ್ಲದೇ, ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಲಾಕ್​ಡೌನ್ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾಗಿರುವ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.