ETV Bharat / state

ಸಚಿವ ಸಂಪುಟದಲ್ಲಿ ನನಗೆ ಜವಾಬ್ದಾರಿ ನೀಡಿ: ಶಾಸಕ ಮಹೇಶ್ ಕುಮಟಳ್ಳಿ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಸಚಿವ ಸಂಪುಟದಲ್ಲಿ ನನಗೂ ಜವಾಬ್ದಾರಿ ನೀಡಿ. ಭಾರತೀಯ ಜನತಾ ಪಕ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಯಾವ ಜವಾಬ್ದಾರಿ ನೀಡಿದರು ಅದನ್ನು ನಿಭಾಯಿಸುತ್ತೇನೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ.

author img

By

Published : Jan 17, 2022, 3:37 PM IST

Updated : Jan 17, 2022, 3:51 PM IST

Mahesh Kumathalli
ಮಹೇಶ್ ಕುಮಟಳ್ಳಿ

ಅಥಣಿ (ಬೆಳಗಾವಿ): ಜನವರಿ 24ರ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ ಆಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದ್ದಂತೆ, ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಈ ಬಾರಿ ಸಂಪುಟದಲ್ಲಿ ನನಗೂ ಜವಾಬ್ದಾರಿ ನೀಡಿ, ನಾನು ನಿಭಾಯಿಸುತ್ತೇನೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ.

ಶಾಸಕ ಮಹೇಶ್ ಕುಮಟಳ್ಳಿ

ಅಥಣಿ ವಿಧಾನಸಭಾ ಕ್ಷೇತ್ರದ ಯಂಕಂಚಿ, ಕೋಹಳ್ಳಿ ಹಾಗೂ ಅಥಣಿ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಯಾವ ಜವಾಬ್ದಾರಿ ನೀಡಿದರೂ ಸಹ ಅದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡುವಂತಹ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ ಎಂದರು.

ಯಾವಾಗ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಆಗುತ್ತದೆ ಎಂಬುದು ಗೊತ್ತಿಲ್ಲ. ನಾನು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇನೆ. ಸಿಎಂ ಬದಲಾವಣೆ ಆಗುವುದಿಲ್ಲ, ಮುಂದಿನ ಸಾರ್ವರ್ತಿಕ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ನಡೆಯುತ್ತದೆ. ಸಿಎಂ ಬದಲಾವಣೆಯಾಗುತ್ತಾರೆ ಎಂಬುದು ಕೇವಲ ಊಹಾಪೋಹ ಅಷ್ಟೇ ಎಂದು ಶಾಸಕ ಕುಮಟಳ್ಳಿ ಹೇಳಿದ್ರು.

ಇದನ್ನೂ ಓದಿ: ಹೋಂ ಐಸೊಲೇಷನ್ ಮುಕ್ತಾಯ : ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ ಸಿಎಂ ಬೊಮ್ಮಾಯಿ

ಬಸವೇಶ್ವರ ಏತ ನೀರಾವರಿಯಲ್ಲಿ ಅಕ್ರಮ ನಡೆದಿದೆ ಎಂದು ತಿಳಿದುಬಂದಿದೆ. ಕಾನೂನು ಪ್ರಕಾರ ತನಿಖೆ ಆಗುತ್ತದೆ. ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗುತ್ತದೆ ಎಂದರು.

Last Updated : Jan 17, 2022, 3:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.