ETV Bharat / state

ಬೆಳಗಾವಿಗೆ ಅಕ್ರಮವಾಗಿ ಗೋವಾ ಮದ್ಯ ಸಾಗಾಟ: ಕಾರವಾರ ಮೂಲದ ಇಬ್ಬರು ಅರೆಸ್ಟ್ - ಬೆಳಗಾವಿಗೆ ಅಕ್ರಮವಾಗಿ ಗೋವಾ ಮದ್ಯ ಸಾಗಾಟ

ಬೆಳಗಾವಿ ತಾಲೂಕಿನ ಕರ್ಲೇ - ಬಾದರವಾಡಿ ಮಾರ್ಗಮಧ್ಯೆ 18,720 ಸಾವಿರ ಮೌಲ್ಯದ 219 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಕೃತ್ಯಕ್ಕೆ ಬಳಸಿದ ಕಾರು ಜಪ್ತಿ ಮಾಡಿಕೊಳ್ಳಲಾಗಿದೆ.

Goa liquor smuggling
ಬೆಳಗಾವಿಗೆ ಅಕ್ರಮವಾಗಿ ಗೋವಾ ಮದ್ಯ ಸಾಗಾಟ
author img

By

Published : Dec 21, 2020, 7:34 PM IST

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಕಾರವಾರ ಮೂಲದ ಇಬ್ಬರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ‌.

ಕಾರವಾರ ಜಿಲ್ಲೆಯ ಹಳಿಯಾಳ ತಾಲೂಕಿನ ಯಡೋಗಾ ಗ್ರಾಮದ ಸಂತೋಷ ಕವಂದಲಕರ ಹಾಗೂ ಕಾರವಾರ ಜಿಲ್ಲೆಯ ಹಳಿಯಾಳ ಪಟ್ಟಣದ ಮಹ್ಮದ್​ಗೌಸ್ ಮನಿಯಾರ ಬಂಧಿತರು‌. ಬೆಳಗಾವಿ ತಾಲೂಕಿನ ಕರ್ಲೇ - ಬಾದರವಾಡಿ ಮಾರ್ಗಮಧ್ಯೆ 18,720 ಸಾವಿರ ಮೌಲ್ಯದ 219 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಗಡಿಜಿಲ್ಲೆ ಬೆಳಗಾವಿಯಲ್ಲಿ ನಾಳೆ ಮೊದಲ ಹಂತದ ಗ್ರಾ.ಪಂ. ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿಗೆ ಅಕ್ರಮವಾಗಿ ಗೋವಾ ಮದ್ಯ ಸಾಗಿಸಲಾಗುತ್ತಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.