ಗೋಕಾಕ್: ಸಾಮಾನ್ಯ ಕಾರ್ಯಕರ್ತರನನ್ನು ಗುರುತಿಸಿ ಗಡಿ ಅಭಿವೃದ್ಧಿ ಪ್ರಾಧಿಕಾರ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ತಿಳಿಸಿದ್ದಾರೆ.
ಗೋಕಾಕ ತಾಲೂಕಿನಲ್ಲಿ ನಮ್ಮ ಹೋರಾಟ, ಒಂದು ವ್ಯವಸ್ಥೆ ಬದಲಾವಣೆ ವಿರುದ್ಧವಾಗಿದೆ. ಸುಮಾರು 30 ವರ್ಷದಿಂದ ನಿರಂತರವಾಗಿ ಹೋರಾಟ ಮಾಡುತ್ತಾ, ಬಂದಿದ್ದು, ಮುಂದೆಯೂ ಕೂಡ ಈ ಹೋರಾಟ ಮುಂದುವರೆಯಲಿದೆ. ಈ ಸಂದರ್ಭದಲ್ಲಿ ಅಧ್ಯಕ್ಷ ಹುದ್ದೆ ಸ್ವೀಕಾರ ಮಾಡುವುದೋ, ಬಿಡುವುದೋ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದುವರೆಯುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.