ETV Bharat / state

ಗೋಕಾಕ್ ಯುವಕನ‌ ಕೊಲೆ ಕೇಸ್: ಓರ್ವ ಅಪ್ರಾಪ್ತ ಸೇರಿ ಏಳು ಜನ ಆರೋಪಿಗಳ ಬಂಧನ - ಕಲ್ಲು ತೂರಾಟ

Seven accused arrested in Gokak youth murder case: ಕೊಲೆಯಾದ ಶಾನೂರ ಪೂಜೇರಿ ಸಂಬಂಧಿಕರು ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದರು. ಪ್ರಕರಣ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

arrested accused
ಬಂಧಿತ ಆರೋಪಿಗಳು
author img

By ETV Bharat Karnataka Team

Published : Nov 14, 2023, 7:05 AM IST

ಬೆಳಗಾವಿ: ಭಾನುವಾರ ರಾತ್ರಿ ಗೋಕಾಕ್ ಪಟ್ಟಣದಲ್ಲಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಜನ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಗೋಕಾಕ್ ಪಟ್ಟಣದ ಆದಿಜಾಂಬವ ನಗರದ ಶಾನೂರ (ಸಂತೋಷ) ಪೂಜೇರಿ 26 ವರ್ಷ ಕೊಲೆಯಾದ ಯುವಕ. ಮೃತ ಶಾನೂರ ಸ್ಥಳೀಯ ಪೆಟ್ರೋಲ್ ಪಂಪ್​ನಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ಪೆಟ್ರೋಲ್ ಪಂಪ್​ನಲ್ಲಿ ಪೂಜೆ ಮುಗಿಸಿಕೊಂಡು ಮರಳಿ ಮನೆಗೆ ಹೋಗುವ ಸಂದರ್ಭದಲ್ಲಿ ದಾಳಿ ಮಾಡಿದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಶಾನೂರನನ್ನು ಕೊಲೆಗೈದು ಪರಾರಿಯಾಗಿದ್ದರು. ಈ ಘಟನೆ ದೀಪಾವಳಿ ಹಬ್ಬದ ಆಚರಣೆಯಲ್ಲಿ ತೊಡಗಿದ್ದ ಗೋಕಾಕ್ ಜನರನ್ನು ಬೆಚ್ಚಿ ಬೀಳುವಂತೆ ಮಾಡಿತ್ತು.

arrested accused
ಬಂಧಿತ ಆರೋಪಿಗಳು

ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಗೋಕಾಕ್ ಶಹರ್ ಠಾಣೆಯ​ ಪೊಲೀಸರು ಕೊಲೆ ಆರೋಪದಲ್ಲಿ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕ ಸೇರಿ ಒಟ್ಟು 7 ಜನರನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಸುನೀಲ ಮೇಸ್ತ್ರಿ(25), ಕಾಡಪ್ಪ ಮೇಟ್ರಿ (54), ಶಿವಕುಮಾರ ಬಸವರಾಜ (24), ವಾಸುದೇವ ಮೇಸ್ತ್ರಿ (20), ಸಂಜಯ ಮೇಸ್ತ್ರಿ (22), ಹನುಮಂತ (22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಉದ್ರಿಕ್ತರಿಂದ ಆರೋಪಿ ಮನೆ‌‌ ಮೇಲೆ ಕಲ್ಲು ತೂರಾಟ: ಶಾನೂರ ಕೊಲೆಯಾದ ಸುದ್ದಿ ತಿಳಿಯುತ್ತಿದ್ದಂತೆ ಉದ್ರಿಕ್ತಗೊಂಡ ಆತನ ಸಂಬಂಧಿಕರು ಆರೋಪಿ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ಗೋಕಾಕ್ ಶಹರ್​ ಪೊಲೀಸರು ಅವರನ್ನು ಸಮಾಧಾನಪಡಿಸಿ ಪರಿಸ್ಥಿತಿ ಹತೋಟಿಗೆ ತಂದರು. ಬಳಿಕ ಪೊಲೀಸ್ ಠಾಣೆಗೆ ಆಗಮಿಸಿದ ಶಾನೂರ ಕುಟುಂಬಸ್ಥರು ಮತ್ತು ಸ್ನೇಹಿತರು ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು‌. ರಾತ್ರೋರಾತ್ರಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಪ್ರತಿಭಟನಾಕಾರರನ್ನು ಮನವೊಲಿಸಿ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕವೇ ಪ್ರತಿಭಟನೆ ವಾಪಸ್​ ಪಡೆದಿದ್ದರು.

ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಮೃತ ಶಾನೂರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆರು ತಿಂಗಳ ಹಿಂದೆಯಷ್ಟೇ ಶಾನೂರ ವಿವಾಹವಾಗಿದ್ದು, ಆತನ ಪತ್ನಿ ಈಗ ಗರ್ಭಿಣಿಯಾಗಿದ್ದಾರೆ. ಯುವಕನ ಕೊಲೆ ಪ್ರಕರಣದಲ್ಲಿ ಓರ್ವ ಅಪ್ರಾಪ್ತ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದೇವೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದಾರೆ‌.

ಇದನ್ನೂ ಓದಿ: ಉಡುಪಿ: ನಾಲ್ವರ ಕೊಲೆ ಪ್ರಕರಣ, ಶಂಕಿತ ಆರೋಪಿ ಕರೆದೊಯ್ದ ಬಗ್ಗೆ ಆಟೋ ಚಾಲಕ ಹೇಳಿದ್ದೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.