ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಫೆ.10ರಂದು ಮಲಗಿದ್ದ ದಂಪತಿಗಳ ಮೇಲೆ ಕೊಲೆ ಯತ್ನ ನಡೆದಿತ್ತು. ಇನ್ನು ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಫೆ. 12ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪತ್ನಿ ರೇಖಾ ಮಾದರ ಸಾವನ್ನಪ್ಪಿದ್ದರು. ಇದೀಗ ಪತಿ ಮಹಾದೇವ ಮಾದರ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಘಟನೆ ವಿವರ: ಫೆ. 10ರಂದು ಕೊಕಟನೂರ ಗ್ರಾಮದ 58 ವರ್ಷದ ಮಹಾದೇವ ಹಾಗೂ 50 ವರ್ಷದ ರೇಖಾ ಇಬ್ಬರೂ ಸಹ ಕೊಠಡಿಯಲ್ಲಿ ಮಲಗಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಘಟನೆಯಲ್ಲಿ ಬೆಂಕಿಯ ಕೆನ್ನಾಲಿಗೆಯಿಂದ ತೀವ್ರವಾಗಿ ಗಾಯಗೊಂಡಿದ್ದ ದಂಪತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಐಗಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.