ETV Bharat / state

ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ: ಎಸ್.ಆರ್.ಪಾಟೀಲ

ಕೊರೊನಾ ಸಂಬಂಧ ಸಾಮಗ್ರಿ ಖರೀದಿಯಲ್ಲಿ ಸರ್ಕಾರ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಸಿದೆ. ಈ ಬಗ್ಗೆ ಸದನ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಆಗ್ರಹಿಸಿದ್ದಾರೆ.

Government Corruption in Corona Equipment Purchase: S R Patila
ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ: ಎಸ್. ಆರ್. ಪಾಟೀಲ
author img

By

Published : Jul 16, 2020, 6:59 PM IST

ಬಾಗಲಕೋಟೆ: ಕೊರೊನಾ ಸೋಂಕು ತಡೆಗಟ್ಟುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೊರೊನಾ ಸಂಬಂಧ ಸಾಮಗ್ರಿ ಖರೀದಿಯಲ್ಲಿ ಸರ್ಕಾರ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಸಿದ್ದು, ಜಂಬಲರಾಣಿ ಡಕಾಯಿತಿ ಪ್ರಕರಣ ನೆನಪಿಗೆ ಬರುತ್ತಿದೆ. ಈ ಬಗ್ಗೆ ಸದನ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ ಆಗ್ರಹಿಸಿದ್ದಾರೆ.

ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ: ಎಸ್. ಆರ್. ಪಾಟೀಲ

ನವನಗರದ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಕೋವಿಡ್-19ಗೆ ಸಂಬಂಧಿಸಿದಂತೆ ಸಾಮಗ್ರಿ ಖರೀದಿಯಲ್ಲಿ ನಡೆಸಿದ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ಸಮೇತ ಬಹಿರಂಗಪಡಿಸುತ್ತೇವೆ. ಎಲ್ಲಾ ದಾಖಲೆಯನ್ನು ಪಡೆದುಕೊಂಡು ಆ ಮೂಲಕ ಹೋರಾಟ ಮಾಡುತ್ತೇವೆ ಎಂದ ಅವರು ಸರ್ಕಾರ ಇಲ್ಲಿಯವರೆಗೂ ಎಷ್ಟು ವೆಚ್ಚ ಮಾಡಿದೆ? ಲೆಕ್ಕ ಕೂಡಲಿ, ಇಲ್ಲವೇ ಸಾರ್ವಜನಿಕವಾಗಿ ಲೆಕ್ಕವನ್ನು ತನಿಖೆ ಮಾಡುವುದಕ್ಕೆ ಸದನ ಸಮಿತಿ ರಚನೆ ಮಾಡಲಿ ಎಂದು ಆಗ್ರಹಿಸಿದರು.

ವಿಧಾನ ಸೌಧದಲ್ಲಿ ಕೊರೊನಾ ಭೀತಿ ಇರುವುದರಿಂದ ಉತ್ತರ ಕರ್ನಾಟಕಕ್ಕೆ ಪ್ರಾತಿನಿತ್ಯ ನೀಡುವ ದೃಷ್ಟಿಯಿಂದ ಬೆಳಗಾವಿಗೆ ಕೆಲ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂದರು.

ಇದರ ಜೊತೆಗೆ ಕೃಷಿ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ಬದಲಾವಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, ರಾಜ್ಯಾದ್ಯಂತ ಪಕ್ಷಾತೀತವಾಗಿ ರೈತರು ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ಈ ನೀತಿಯನ್ನು ವಿರೋಧಿಸಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.