ಬೆಳಗಾವಿ: ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ನೀಡಿದ ನಾಲ್ಕು ಸಚಿವ ಸ್ಥಾನ ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಇದೀಗ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ನಗರದ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರಿಂದ ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಯುತ್ತದೆ. ತಾವು ಆಡಳಿತದಲ್ಲಿದ್ದಾಗ ರಾಜ್ಯಕ್ಕೆ ನೀವೆಷ್ಟು ಮಂತ್ರಿ ಸ್ಥಾನ ಕೊಟ್ಟಿದ್ದೀರಿ ಎಂದು ಕಾಂಗ್ರೆಸ್ ನಾಯಕರು ಹೇಳಲಿ ಎಂದು ಕುಟುಕಿದರು.
ಎಲ್ಲರೂ ಸೇರಿ ಕೆಲಸ ಮಾಡಬೇಕು: ಸಂಪುಟ ವಿಸ್ತರಣೆಯಲ್ಲಿ ಪ್ರಮುಖ ಇಲಾಖೆಗಳು ನಮ್ಮ ರಾಜ್ಯಕ್ಕೆ ಸಿಕ್ಕಿವೆ. ಶೋಭಾ ಕರಂದ್ಲಾಜೆ ಸೇರಿ ನಾಲ್ವರಿಗೂ ಮಹತ್ವದ ಖಾತೆಯನ್ನೇ ವಹಿಸಲಾಗಿದೆ. ಇಲಾಖೆ ಮುಖ್ಯವಲ್ಲ, ಅದರಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದು ಮುಖ್ಯ. ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಸೇರಿ ಕೆಲಸ ಮಾಡಬೇಕು ಎಂದರು.
ಓದಿ: ಮೋದಿ ಮಾದರಿಯಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಿಎಂ ಬಿಎಸ್ವೈ ಚಿಂತನೆ