ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಪಲ್ಟಿಯಾಗಿ ಮುಂದೆ ಸಾಗುತ್ತಿದ್ದ ಜೆಸಿಬಿಗೆ ಗುದ್ದಿದೆ. ಈ ವೇಳೆ ಜೆಸಿಬಿ ಚಾಲಕ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.