ETV Bharat / state

ಬೆಳಗಾವಿಯಲ್ಲಿ ಅಧಿವೇಶನ ಕರೆಯುವ ಬದಲು ಕಾರ್ಯಕಾರಿಣಿ ಸಭೆ ನಡೆಸಿದ್ದಾರೆ: ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ - ಬಿಜೆಪಿ ವಿರುದ್ಧ ಗುಡುಗಿದ ಡಿ.ಕೆ.ಶಿವಕುಮಾರ್

ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಹೇಗೆ ಜಾರಿಗೆ ತರುತ್ತದೆ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಡಿ.ಕೆ.ಶಿವಕುಮಾರ್​
DK Shivkumar
author img

By

Published : Dec 5, 2020, 4:58 PM IST

ಬೆಳಗಾವಿ: ಉತ್ತರ ಕರ್ನಾಟಕದ ಜನರಿಗೆ ನ್ಯಾಯ ಒದಗಿಸಲು ಇಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದಾರೆ. ಆದರೆ ಕೊರೊನಾ ನೆಪ‌ ಹೇಳಿ ಚಳಿಗಾಲದ ಅಧಿವೇಶನ ಬೆಂಗಳೂರಿಗೆ ಶಿಪ್ಟ್ ಮಾಡಿರುವ ಬಿಜೆಪಿ ಸರ್ಕಾರಕ್ಕೆ ಜನರ ಬಗ್ಗೆ ಕಳಕಳಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಬೆಂಗಳೂರು, ಕೃಷ್ಣಾ, ವಿಧಾನಸೌಧ, ಕಚೇರಿ ಬಿಟ್ಟರೆ ಎಲ್ಲಿಯೂ ಬರಲಿಲ್ಲ. ಇಲ್ಲಿ ಸುವರ್ಣ ವಿಧಾನಸೌಧ ಯಾವ ಉದ್ದೇಶಕ್ಕೆ ನಿರ್ಮಾಣ ಮಾಡಿದ್ದಾರೆ. ಉತ್ತರ ಕರ್ನಾಟಕದ ಜನರ ಬಗ್ಗೆ ಸರ್ಕಾರಕ್ಕೆ ಕಳಕಳಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭೀಕರ ಪ್ರವಾಹದಲ್ಲಿ ಮನೆಗಳು ಮುಳುಗಿ ಹೋಗಿವೆ. ಇಲ್ಲಿನ ಜನರಿಗೆ ಯಾವ ಸೂರು ಕೊಡಲು ಸರ್ಕಾರಕ್ಕೆ ಆಗಲಿಲ್ಲ. ಸಂತ್ರಸ್ತರಿಗೆ ಪರಿಹಾರ, ಮನೆ ಕೊಡಲು ಸಾಧ್ಯವಾಗಲಿಲ್ಲ. ಅಧಿವೇಶನದಲ್ಲಿ ಕರೆದು ನ್ಯಾಯ ಒದಗಿಸಿಕೊಡುವುದಾಗಿ ಹೇಳಿದರು. ಆದರೆ ಅವರಿಗೆ ಪರಿಹಾರ ಸಿಗಲಿಲ್ಲ. ಆಗ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಮಾಡಲಾಗುವುದು ಎಂದಿದ್ದರು. ಆದರೀಗ ಬೆಳಗಾವಿಯಲ್ಲಿ ಅಧಿವೇಶನ ಕರೆಯುವ ಬದಲು ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ :'ಸಿದ್ದರಾಮಯ್ಯ ಲೀಡರ್​ಶಿಪ್​ ಕ್ರಾಸ್ ಬ್ರೀಡ್, ದೇಶದ ಬೌಂಡರಿ ಕ್ರಾಸ್ ಮಾಡಿ ಬ್ರೀಡ್: ಸಿ.ಟಿ ರವಿ ಟಾಂಗ್​

ಅವರು ಇಲ್ಲಿಗೆ ಬಂದು ಎಷ್ಟು ಬೇಕಾದರೂ ಸಭೆ ನಡೆಸಲಿ. ಅದು ಅವರ ವಿಚಾರ. ಆದರೆ ವಿನಾ ಕಾರಣ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದು ನಾವು ಎಂದು ಹೇಳಿಕೊಂಡು ತಿರುಗಾಡುವ ಬೆಳಗಾವಿ ನಾಯಕರು ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಯಾವುದೋ ಒಂದು ಸಮಾಜವನ್ನು ಗಮನದಲ್ಲಿಟ್ಟುಕೊಂಡು ‌ಸರ್ಕಾರ ಗೋಹತ್ಯೆ ನಿಷೇಧ ಮಾಡಲು ಹೊರಟಿದೆ. ವಯಸ್ಸಾದ ಗೋವುಗಳನ್ನು ಯಾರು ಖರೀದಿ ಮಾಡುತ್ತಾರೆ. ಗೋಹತ್ಯೆ ನಿಷೇಧ ಕಾಯ್ದೆ ತರಲಿ ನೋಡೋಣ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.