ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂಪರ್ ಕೊಡುಗೆ ನೀಡಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅಂತಿಮ ಮುದ್ರೆ ಒತ್ತಲಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ 2,500 ಕೋಟಿ ರೂ. ಅನುದಾನ ನೀಡುವ ಮಹತ್ವದ ಪ್ರಸ್ತಾಪವನ್ನು ಮುಂದಿಟ್ಟು ಅನುಮೋದನೆ ಪಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗದೆ. ಈಗಾಗಲೇ ಈ ವಿಚಾರವಾಗಿ ಸಂಪುಟ ಸಹೋದ್ಯೋಗಿಗಳ ಜೊತೆ ಸಿಎಂ ಚರ್ಚೆ ನಡೆಸಿದ್ದು, ಬೆಳಗಾವಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎನ್ನಲಾಗುತ್ತಿದೆ.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ. ಸರ್ಕಾರದ ಆಡಳಿತ ಯಂತ್ರ ಕೇವಲ ಬೆಂಗಳೂರು ಹಾಗೂ ಹಳೇ ಮೈಸೂರು ಭಾಗಕ್ಕೆ ಮಾತ್ರ ಸೀಮಿತವಾಗಿದೆ. ರಾಜ್ಯದ ಇತರೆ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬ ಆರೋಪ ಮಾಡುತ್ತಿವೆ. ಗಡಿ ಜಿಲ್ಲೆಯನ್ನು ನಿರ್ಲಕ್ಷಿಸಿಲ್ಲ ಎಂದು ತೋರಿಸಿಕೊಳ್ಳುವ ಸಲುವಾಗಿಯೇ ಇಂತಹ ಮಹತ್ವದ ಘೋಷಣೆಗೆ ಮುಂದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಹಾ.. ಹಾ.. ಹೋ ಶಬ್ದಗಳಿದ್ದ ವಿಡಿಯೋಗಳಿಗೆ ಸ್ಟೇ ತಂದ 12 ಪತಿವ್ರತರು.. ಬಿಜೆಪಿ ಸುಮ್ಮನ್ಯಾಕಿದೆ?.. ಇಬ್ರಾಹಿಂ