ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿವಿಧೆಡೆ ಮಳೆಯ ಆರ್ಭಟ ಮುಂದುವರೆದಿದೆ. ಮಳೆಯಿಂದ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಬಂದ ಭಕ್ತರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಶ್ರೀ ರೇಣುಕಾದೇವಿ ದೇವಸ್ಥಾನದಲ್ಲಿಂದು ಗೌರಿ ಹುಣ್ಣಿಮೆ ಆಚರಿಸಲಾಗುತ್ತಿತ್ತು. ಹೀಗಾಗಿ, ರಾಜ್ಯ ಹಾಗೂ ಹೊರ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಧಾರಾಕಾರ ಮಳೆಯ ಮಧ್ಯೆಯೂ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದರು.
ಕೊಡೆ ಹಿಡಿದುಕೊಂಡೇ ಸಾಲಿನಲ್ಲಿ ನಿಂತಿರುವ ಭಕ್ತರು ಶ್ರೀ ಯಲ್ಲಮ್ಮದೇವಿ ದರ್ಶನ ಪಡೆದು ಪುನೀತರಾದರು.