ETV Bharat / state

ಗ್ರಾ.ಪಂ ಚುನಾವಣೆ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ: ಬೆಳಗಾವಿ ಡಿಸಿ - ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾನೂನು ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ, ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಅಂತಹವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

grmha panchayat election Legal action if violation of rule
ಬೆಳಗಾವಿ ಡಿಸಿ ಎಚ್ಚರಿಕೆ
author img

By

Published : Dec 13, 2020, 11:00 PM IST

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆ ನಿಯಮ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ.

ಓದಿ: ಡಿ.22ಕ್ಕೆ 3,021 ಗ್ರಾಪಂಗಳಿಗೆ ಮೊದಲ ಹಂತದ ಚುನಾವಣೆ: 1.50 ಲಕ್ಷಕ್ಕೂ ಹೆಚ್ಚು ನಾಮಪತ್ರ ಸಲ್ಲಿಕೆ

1) ರಾಜಕೀಯ ಪಕ್ಷಗಳು ಸಭೆ-ಸಮಾರಂಭ ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ-ಬ್ಯಾನರ್‌ಗಳನ್ನು ಬಳಸುವಂತಿಲ್ಲ.

2) ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.

3) ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ/ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ಹಂಚುವುದು ಮಾಡುವಂತಿಲ್ಲ.

4) ರಾಜಕೀಯ ಮುಖಂಡರ ಭಾವಚಿತ್ರ, ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ.

5) ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹಿರಾತು ನೀಡುವಂತಿಲ್ಲ.

ಓದಿ: 5 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯತ್ವ ಹರಾಜು ಹಾಕಿದ ಗ್ರಾಮಸ್ಥರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.