ಬೆಂಗಳೂರು: ಭಾರತದಲ್ಲಿ ಹಲಾಲ್ ನಿಷೇಧ ಆಗಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಹಲಾಲ್ ನಿಷೇಧಿಸುವ ಸಂಬಂಧ ಪ್ರತಿಕ್ರಿಯಿಸಿ, ಹಲಾಲ್ ಭಾರತದಲ್ಲಿ ಬ್ಯಾನ್ ಆಗಬೇಕು. ಅದು ನಮ್ಮ ದೇಶದ ಸಂಸ್ಕೃತಿ ಅಲ್ಲ ಎಂದಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಒಂದು ಹೆಜ್ಜೆ ಹಿಂದಿಟ್ಟು ಮುಂದೆ ಜಿಗಿಯುತ್ತಾರೆ. ಅವರು ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಅದು ನಿರ್ಣಯ ಆದಂತೆ ಎಂದು ಸೂಚ್ಯವಾಗಿ ತಿಳಿಸಿದ್ದಾರೆ. ಚಳಿಗಾಲ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಲಾಲ್ ನಿಷೇಧಿಸುವ ಖಾಸಗಿ ಬಿಲ್ಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವಿಜಯಪುರ ಶಾಸಕ ತಿಳಿಸಿದರು.
ಆಹಾರ ಪದಾರ್ಥಕ್ಕೆ ಹಲಾಲ್ ಪ್ರಮಾಣ ಪತ್ರಗಳನ್ನು ನೀಡುವ ಸಂಸ್ಥೆಗಳು 'ಧಾರ್ಮಿಕ ಸಂಸ್ಥೆಗಳು' ಎಂದು ನೋಂದಣಿಯಾಗಿದ್ದು, ಧಾರ್ಮಿಕ ಸಂಸ್ಥೆಗಳಿಗೆ ಯಾವುದೇ ರೀತಿಯ ಪ್ರಮಾಣ ಪತ್ರಗಳನ್ನು ನೀಡುವ ಅಧಿಕಾರ ಇರುವುದಿಲ್ಲ. ಈ ವಿಚಾರವಾಗಿ ಖಾಸಗಿ ವಿಧೇಯಕ ಮಂಡಿಸಲು ಸಭಾಪತಿಗಳಿಗೆ ಬಿಜೆಪಿ ಪರಿಷತ್ ಸದಸ್ಯ ಎನ್.ರವಿ ಕುಮಾರ್ ಪತ್ರ ಬರೆದಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ನಿಟ್ಟಿನಲ್ಲಿ ಖಾಸಗಿ ವಿಧೇಯಕ ಮಂಡಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: ನಾಳೆ ಪಂಚಮಸಾಲಿ ಮೀಸಲಾತಿ ಬಗ್ಗೆ ಸಿಎಂ ಐತಿಹಾಸಿಕ ಘೋಷಣೆ: ಯತ್ನಾಳ್