ETV Bharat / state

ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಕೂಡಲೇ ಪರಿಶೀಲಿಸಿ: ಹೆಚ್​ಡಿಕೆ ಒತ್ತಾಯ - ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಕೂಡಲೇ ಪರಿಶೀಲಿಸಿ

ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಕೂಡಲೇ ಪರಿಶೀಲಿಸಿ, ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ
HD Kumarswamy
author img

By

Published : Jan 2, 2021, 2:28 PM IST

ಬೆಂಗಳೂರು : ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಓದಿ: ಮೊದಲ ಹಂತದಲ್ಲಿ ಮೂರು ಕೋಟಿ ಜನರಿಗೆ ಮಾತ್ರ ಉಚಿತ ಕೋವಿಡ್​ ಲಸಿಕೆ: ಹರ್ಷವರ್ಧನ್

ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾಲಿಕೆ ಎದುರು ಧ್ವಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದು ಹೋಗಿದೆ. ಕರ್ನಾಟಕದಲ್ಲಿ ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೆ ದಾಳಿ ನಡೆಯುತ್ತದೆ. ಅಂತಹವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡ ಪ್ರೇಮ ಪ್ರಶ್ನಾರ್ಹ ಎಂದಿದ್ದಾರೆ.

  • ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ 'ಕನ್ನಡಿಗನೇ ಸಾರ್ವಭೌಮ' ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು...
    4/4

    — H D Kumaraswamy (@hd_kumaraswamy) January 2, 2021 " class="align-text-top noRightClick twitterSection" data=" ">

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ 'ಕನ್ನಡಿಗನೇ ಸಾರ್ವಭೌಮ' ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.