ಬೆಳಗಾವಿ/ಚಿಕ್ಕೋಡಿ: ಕೊರೊನಾ ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಜನರನ್ನು ಕ್ವಾರಂಟೈನ್ ಮಾಡಲು ಒಂದೇ ವಾಹನದಲ್ಲಿ ಕರೆ ತಂದು ಜಿಲ್ಲಾಡಳಿತ ಯಡವಟ್ಟು ಮಾಡಿದೆ.
ರೋಗಿ ನಂ.293 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಜನರ ಕ್ವಾರಂಟೈನ್ ಮಾಡುವ ವೇಳೆ ಈ ಯಡವಟ್ಟು ಮಾಡಲಾಗಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಲಾಡ್ಜ್ನಲ್ಲಿ ಇವರನ್ನು ಕ್ವಾರಂಟೈನ್ ಮಾಡಬೇಕಾಗಿತ್ತು.
ಒಂದೇ ಕೋಣೆಯಲ್ಲಿ ಮೂವರನ್ನ ಜಿಲ್ಲಾಡಳಿತ ಕ್ವಾರಂಟೈನ್‌ಗೆ ಒಳಪಡಿಸಿದೆ. ಈ ಯಡವಟ್ಟಿನಿಂದ ಕೊರೊನಾ ಇಲ್ಲದಿರುವವರಿಗೆ ಸೋಂಕು ತಗುಲುವ ಸಾಧ್ಯತೆ ಇದೆ. ತಾಲೂಕು ಆರೋಗ್ಯ ಅಧಿಕಾರಿಯ ನಿರ್ಲಕ್ಷ್ಯ ಇದಕ್ಕೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ.