ಚಿಕ್ಕೋಡಿ: ಕಳೆದ ಎರಡ್ಮೂರು ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.
ಗ್ರಾಮದಲ್ಲಿ ಕೊರೊನಾ ಸೋಂಕು ದೃಢವಾಗುತ್ತಿದಂತೆಯೇ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ತಪಾಸಣೆ ಕಾರ್ಯ ಭರದಿಂದ ಸಾಗಿದೆ. ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಇಂದು 128 ಜನರನ್ನು ತಪಾಸಣೆ ಮಾಡಲಾಯಿತು. ಭಾನುವಾರ 190 ಜನರನ್ನು ತಪಾಸಣೆ ಮಾಡಿದ್ದು, ಇನ್ನು ವರದಿ ಬಂದಿಲ್ಲ. ಅಲ್ಲದೇ ಗ್ರಾಮದಲ್ಲಿ ಡಂಗುರ ಸಾರುವ ಮೂಲಕ ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಸುವಂತೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಇದನ್ನೂ ಓದಿ: ಕೋವಿಡ್ ಲಸಿಕೆ ಸುರಕ್ಷಿತ, ಎಲ್ಲರೂ ಪಡೆಯಿರಿ: ಜನತೆಗೆ ಮನವಿ ಮಾಡಿದ ಡಿಸಿ, ಎಸ್ಪಿ, ಸಿಇಓ
ಆರೋಗ್ಯ ಇಲಾಖೆ ವತಿಯಿಂದ ಮನೆ ಮನೆಗೆ ತೆರಳಿ ಕೊರೊನಾ ತಪಾಸಣೆ ಮಾಡಲಾಯಿತು. ಬಾವನಸೌಂದತ್ತಿ ಗ್ರಾಮದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ. ಪ್ರತಿ ಮನೆಮನೆಗೆ ಭೇಟಿ ನೀಡಿ ಹಿರಿಯರು, ಮಕ್ಕಳು ಸೇರಿ ಎಲ್ಲರೂ ತಪಾಸಣೆ ಮಾಡಬೇಕು ಎಂದು ಗ್ರಾಮಸ್ಥರಿಗೆ ಮನವಿ ಮಾಡುವುದರ ಜೊತೆಗೆ ಅವರನ್ನು ಆರೋಗ್ಯ ಇಲಾಖೆ ಕೊರೊನಾ ತಪಾಸಣೆಗೆ ಒಳಪಡಿಸುತ್ತಿದೆ.