ETV Bharat / state

ಮಳೆ ಅನಾಹುತ: ಬೆಂಗಳೂರು-ಪುಣೆ ರಸ್ತೆ ಬಂದ್, ಬೆಳಗಾವಿಯಲ್ಲಿ 139 ಮನೆಗಳು ನೆಲಸಮ - ಬೆಂಗಳೂರು-ಪೂಣೆ ರಾಷ್ಟ್ರೀಯ ಹೆದ್ದಾರಿ ಬಂದ್

ಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಮಳೆಯಿಂದಾಗಿ 139ಕ್ಕೂ ಅಧಿಕ ಮನೆಗಳು ಖಾನಾಪೂರ ತಾಲೂಕಿನಲ್ಲಿ ನೆಲಕ್ಕಚ್ಚಿವೆ.

ಬೆಂಗಳೂರು-ಪೂಣೆ ರಾಷ್ಟ್ರೀಯ ಹೆದ್ದಾರಿ ಬಂದ್
author img

By

Published : Aug 6, 2019, 12:35 PM IST

ಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ 139ಕ್ಕೂ ಅಧಿಕ ಮನೆಗಳು ನೆಲಸಮವಾಗಿವೆ. ಅಲ್ಲದೇ ಪಂಚಗಂಗಾ ನದಿ ನೀರಿನಿಂದ ರಾಷ್ಟ್ರೀಯ ಹೆದ್ದಾರಿ- 4 ಜಲಾವೃತ್ತಗೊಂಡಿದ್ದು, ಬೆಂಗಳೂರು-ಪುಣೆ ರಸ್ತೆಯನ್ನು ಬಂದ್​ ಮಾಡಲಾಗಿದೆ.

ಭಾರಿ ಮಳೆಯಿಂದಾಗಿ ಮನೆಗೆ ನುಗ್ಗಿರುವ ನೀರು

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ಭಾರಿ ಮಳೆಗೆ 139 ಕ್ಕೂ ಹೆಚ್ಚಿನ ಮನೆಗಳು ಧರೆಗುರುಳಿವೆ. ಕೆಲವು ಗ್ರಾಮದಲ್ಲಿ ಮನೆಗೋಡೆ ಕುಸಿತ, ಮೇಲ್ಚಾವಣಿ ಕುಸಿತ, ಇನ್ನೂ ಕೆಲವು ಗ್ರಾಮಗಳಲ್ಲಿ ಮನೆಗಳು ಕುಸಿತವಾಗಿವೆ. ಅಂಗ್ರೋಳ್ಳಿ, ಲಿಂಗನಮಠ, ಚುಂಚವಾಡ, ದೇವಲತ್ತಿ ಗ್ರಾಮಗಳಲ್ಲಿನ ಮನೆಗಳಿಗೆ ಹೆಚ್ಚು ಹಾನಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಳಗಾವಿಯಲ್ಲಿಯೂ ಮಳೆಯ ಆರ್ಭಟ ಮುಂದುವರೆದಿದ್ದು, ನಗರದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಂಜರ್ ಗಲ್ಲಿಯಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು ಮಳೆನೀರು ಹೊರ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.

ಬಾರಿ ಮಳೆಗೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್​:

ಪಂಚಗಂಗಾ ನದಿ ನೀರಿನಿಂದ ರಾಷ್ಟ್ರೀಯ ಹೆದ್ದಾರಿ 4 ಜಲಾವೃತ್ತಗೊಂಡಿದ್ದು, ನಿತ್ಯ ಲಕ್ಷಾಂತರ ವಾಹನಗಳು ಓಡಾಡುವ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಂದ್​ ಆಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ನಿಪ್ಪಾಣಿ ರಾಷ್ಟ್ರೀಯ ಹೆದ್ದಾರಿ ಯಮಗರ್ಣಿ ಗ್ರಾಮದ ಬಳಿ ಹೆದ್ದಾರಿಗೆ ನೀರು ಬಂದಿದ್ದು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

Intro:ಭಾರಿ ಮಳೆಗೆ 139 ಕ್ಕೂ ಅಧಿಕ ಮನೆಗಳು ನೆಲಸಮ

ಬೆಳಗಾವಿ : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ, ನೂರಕ್ಕೂ ಅಧಿಕ ಮನೆಗಳು ನೆಲಸಮವಾಗಿದ್ದು ಜನರ ಬದುಕು ಬೀದಿಗೆ ಬಿದ್ದಿದೆ. ಅನೇಕ ಮನೆಗಳಲ್ಲಿ ನೀರು ಹೊಕ್ಕಿದ್ದರ ಪರಿಣಾಮ ಜನರ ದಿನನಿತ್ಯದ ಕೆಲಸಕ್ಕೆ ತೊಂದರೆ ಉಂಟಾಗಿದೆ.

Body:ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು ಮಳೆಯ ಆರ್ಭಟಕ್ಕೆ ಮನೆಗಳು ಕುಸಿದು ಬೀಳುತ್ತಿವೆ. ತಾಲೂಕಿನ 139 ಕ್ಕೂ ಹೆಚ್ಚಿನ ಮನೆಗಳು ಧರೆಗುರುಳಿವೆ. ಕೆಲವು ಗ್ರಾಮದಲ್ಲಿ ಮನೆ ಗೋಡೆ ಕುಸಿತ, ಮೇಲ್ಛಾವಣಿ ಕುಸಿತ, ಇನ್ನೂ ಕೆಲವು ಗ್ರಾಮಗಳಲ್ಲಿ ಸಂಪೂರ್ಣ ಮನೆ ಕುಸಿತವಾಗಿವೆ. ಅಂಗ್ರೋಳ್ಳಿ, ಲಿಂಗನಮಠ, ಚುಂಚವಾಡ, ದೇವಲತ್ತಿ ಗ್ರಾಮಗಳಲ್ಲಿನ ಮನೆಗಳಿಗೆ ಹೆಚ್ಚು ಹಾನಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಹಶಿಲ್ದಾರ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Conclusion:ಇನ್ನೂ ಬೆಳಗಾವಿಯಲ್ಲಿಯೂ ಮಳೆಯ ಆರ್ಭಟ ಮುಂದುವರೆದಿದ್ದು, ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದೆ. ನಗರದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತ ಉಂಟಾಗಿದ್ದು, ಕಂಜರ್ ಗಲ್ಲಿಯಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು ಮಳೆನೀರು ಹೊರ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.