ಬೆಳಗಾವಿ: ಪಶ್ಚಿಮಘಟ್ಟ ಹಾಗೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಿಡಕಲ್ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಇಂದು ಡ್ಯಾಂನ ಎಂಟು ಗೇಟ್ ಓಪನ್ ಮಾಡಿ ಸುಮಾರು 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡ್ಲಾಯಿತು.
ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಿಸಲಾಗಿದ್ದು, ಭಾರೀ ಮಳೆಯಿಂದ ಒಳಹರಿವು ಹೆಚ್ಚಾಗಿದೆ. ಜಲಾಶಯ ಅವಧಿಗೆ ಮುಂಚೆಯೇ ಭರ್ತಿಯಾಗುವ ಮುಸ್ಸೂಚನೆ ಹಿನ್ನೆಲೆಯಲ್ಲಿ ಜಲಾಶಯದ ಎಂಟು ಗೇಟ್ಗಳನ್ನು ಓಪನ್ ಮಾಡಿ 25 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಹಿಡಕಲ್ ಜಲಾಶಯದ ಒಳಹರಿವು 47 ಸಾವಿರ ಕ್ಯೂಸೆಕ್ ಇದ್ದು, ಈ ಹಿನ್ನೆಲೆಯಲ್ಲಿ ಇಂದು ಡ್ಯಾಂನಿಂದ ನೀರು ಹೊರಕ್ಕೆ ಬಿಡಲಾಯಿತು. 51 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹಿಡಕಲ್ ಡ್ಯಾಂಗೆ 45 ಟಿಎಂಸಿ ನೀರು ಶೇಖರಣೆಯಾಗಿದೆ.