ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದ ಕಾಗವಾಡ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಸತತ ಮೂರ್ನಾಲ್ಕು ಗಂಟೆಗಳ ಕಾಲ ಧಾರಾಕಾರ ಸುರಿದ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ಕೊಂಚ ನೆಮ್ಮದಿ ಸಿಕ್ಕಂತಾಯಿತು. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮುಂಗಾರು ಬಿತ್ತನೆಗೆ ಗಡಿ ಭಾಗದ ರೈತರು ಸಜ್ಜಾಗಿದ್ದಾರೆ.
ತಾಲೂಕಿನಾದ್ಯಂತ ಸುರಿದ ಭಾರಿ ಪ್ರಮಾಣ ಮಳೆ,ಗಾಳಿಗೆ ಕೆಲ ಕಡೆ ವಿದ್ಯುತ್ ವ್ಯತ್ಯಯ ಕೂಡ ಆಗಿತ್ತು.