ಅಥಣಿ (ಬೆಳಗಾವಿ): ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ಜನರಲ್ಲಿ ಕೊರೊನಾ ಆತಂಕ ಶುರುವಾಗಿದೆ.
ಕೊರೊನಾ ವೈರಸ್ ಹಿನ್ನೆಲೆ ಗ್ರಾಮೀಣ ಭಾಗದ ಜನರು ಮಳೆಯಿಂದಾಗಿ ಶೀತ, ಜ್ವರ ಎಂದು ತಾಲೂಕು ಆಸ್ಪತ್ರೆಗೆ ಹೋದರೆ ಪರೀಕ್ಷೆ ನಡೆಸಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇದಾರಿಂದಾಗಿ ತಾಲೂಕಿನ ಜನರು ಆತಂಕಕ್ಕೀಡಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕಿನ ಸ್ಥಳೀಯರೊಬ್ಬರು, ಮಳೆಗಾಲದಲ್ಲಿ ಗ್ರಾಮೀಣ ಭಾಗದ ಜನರಲ್ಲಿ ಸಣ್ಣಪುಟ್ಟ ರೋಗಗಳು ಕಾಣಿಸಿಕೊಳ್ಳುವುದು ಸಹಜ. ಹೀಗಾಗಿ ಸರ್ಕಾರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರ ತಪಾಸಣೆಗೆಂದು ಸರ್ಕಾರಿ ವೈದ್ಯರನ್ನ ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ.