ETV Bharat / state

ಬೆಳಗಾವಿಯಲ್ಲಿ ಮತ್ತೆ ವರುಣಾರ್ಭಟ: ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ - ಬೆಳಗಾವಿಯಲ್ಲಿ ಮಳೆ

ಭಾರೀ ಮಳೆಯಿಂದ ಬೆಳಗಾವಿಯ ಇಂಗಳಗಿ ಗ್ರಾಮ ಮತ್ತೊಮ್ಮೆ ಜಲಾವೃತವಾಗಿದ್ದು, ಜನ ಪರದಾಡುವಂತಾಗಿದೆ.

Heavy  Rain in Belgavi
ವರುಣಾರ್ಭಟಕ್ಕೆ ಮನೆಗಳಿಗೆ ನುಗ್ಗಿದ ನೀರು
author img

By

Published : Sep 11, 2020, 12:02 PM IST

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಸುರಿದ ಭಾರೀ ಮಳೆ ಮತ್ತೊಮ್ಮೆ ಅವಾಂತರ ಸೃಷ್ಟಿಸಿದೆ. ಬೈಲಹೊಂಗಲ ತಾಲೂಕಿನ ಇಂಗಳಗಿ ಗ್ರಾಮದ ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಯೊಳಗೆ ನುಗ್ಗಿದ ನೀರು ಹೊರ ಹಾಕಲು ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವರುಣಾರ್ಭಟಕ್ಕೆ ಮನೆಗಳಿಗೆ ನುಗ್ಗಿದ ನೀರು

ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದಿರುವುದೇ ಈ ಅವಾಂತರಕ್ಕೆ ಕಾರಣ ಎಂದು ಗ್ರಾಮಸ್ಥರು ಅಸಮಾಧಾನ ‌ವ್ಯಕ್ತಪಡಿಸಿದ್ದಾರೆ. ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ಸುರಿದ ಮಳೆಗೆ ಗ್ರಾಮ ಜಲಾವೃತವಾಗಿತ್ತು. ಈ ವೇಳೆ ಸ್ಥಳೀಯರು ಪರಿಹಾರ ಕೇಂದ್ರದಲ್ಲಿ ವಾಸವಿದ್ದರು. ಇದೀಗ ಮತ್ತೆ ಮಳೆರಾಯ ಆರ್ಭಟಿಸಿದ್ದು, ಸ್ಥಳೀಯರು ಸುರಕ್ಷಿತ ಪ್ರದೇಶಕ್ಕೆ ತೆರಳಲು ಪರದಾಡುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.