ETV Bharat / state

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: 7 ಸೇತುವೆಗಳು ಮುಳುಗಡೆ... ಜನರ ಬದುಕು ಕಷ್ಟ ಕಷ್ಟ - ಚಿಕ್ಕೋಡಿ ಮಳೆ ಸುದ್ದಿ

ಭಾರಿ ಮಳೆಯಿಂದ ರಾಯಭಾಗ ಹಾಗೂ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಜಲಾವೃತವಾಗಿವೆ. 14 ಗ್ರಾಮಗಳ ಸಂಪರ್ಕ ಸೇತುವೆಗಳು ಜಲಾವೃತವಾಗಿದ್ದರಿಂದ ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಈ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ
author img

By

Published : Oct 21, 2019, 7:30 PM IST

ಚಿಕ್ಕೋಡಿ : ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕೃಷ್ಣಾ ನದಿಯ ಉಪನದಿಗಳಾದ ದೂದ್​ಗಂಗಾ ಹಾಗೂ ವೇದಗಂಗಾ ನದಿ ನೀರಿನಲ್ಲೂ ಏರಿಕೆಯಾಗಿದೆ. ಹೀಗಾಗಿ ಚಿಕ್ಕೋಡಿ ಉಪವಿಭಾಗದ ಏಳು ಸೇತುವೆಗಳು ಮುಳಗಡೆಯಾಗಿವೆ.

ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣ 1 ಲಕ್ಷ 40 ಸಾವಿರಕ್ಕಿಂತ ಹೆಚ್ಚು ಕ್ಯುಸೆಕ್ ದಾಖಲಾಗಿದ್ದು, ಹಿಪ್ಪರಗಿ ಬ್ಯಾರೇಜ್​ನಿಂದ 1 ಲಕ್ಷ 15 ಸಾವಿರ ಕ್ಯುಸೆಕ್​ ನೀರು ಹೊರ ಬಿಡಲಾಗುತ್ತಿದೆ.

ರಾಯಭಾಗ ಹಾಗೂ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಜಲಾವೃತವಾಗಿದ್ದು, ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುಡಚಿ - ಉಗಾರ, ಕಲ್ಲೋಳ - ಯಡೂರ ಸೇತುವೆ ಜಲಾವೃತವಾಗಿವೆ. ದೂದ್​ಗಂಗಾ-ವೇದಗಂಗಾ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಕಾರದಗಾ-ಬೋಜ, ಭೋಜವಾಡಿ-ಕುನ್ನೂರ, ಜತ್ರಾಟ-ಭೀವಸಿ, ಮಲಿಕವಾಡ-ದತ್ತವಾಡ, ಸಿದ್ನಾಳ-ಅಕ್ಕೋಳ ಸೇತುವೆಗಳೂ ಜಲಾವೃತವಾಗಿವೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ

14 ಗ್ರಾಮಗಳ ಸಂಪರ್ಕ ಸೇತುವೆಗಳು ಜಲಾವೃತವಾಗಿದ್ದು, ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಬೆಳಗಾವಿ ಜಿಲ್ಲಾಡಳಿತದಿಂದ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಇನ್ನೂ ಮೂರು ದಿನ ಮಳೆ ಮುಂದುವರಿಯಲಿರುವುದರಿಂದ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.

Intro:ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಏಳು ಸೇತುವೆಗಳು ಮುಳಗಡೆBody:

ಚಿಕ್ಕೋಡಿ :

ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು ಕೃಷ್ಣಾ ನದಿಯ ಉಪ ನದಿಗಳಾದ ದೂಧಗಂಗಾ ಹಾಗೂ ವೇದಗಂಗಾ ನದಿ ನೀರಿನಲ್ಲೂ ಏರಿಕೆಯಾಗಿದ್ದು ಚಿಕ್ಕೋಡಿ ಉಪವಿಭಾಗದ ಏಳು ಸೇತುವೆಗಳು ಮುಳಗಡೆಯಾಗಿವೆ.

1 ಲಕ್ಷ 40 ಸಾವಿರಕ್ಕಿಂತ ಹೆಚ್ಚು ಕ್ಯೂಸೆಕ್ ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣ ದಾಖಲಾಗಿದ್ದು, ಹಿಪ್ಪರಗಿ ಬ್ಯಾರೇಜನಿಂದ 1 ಲಕ್ಷ 15 ಸಾವಿರ ಕ್ಯೂಸೇಕ ನೀರು ಹೊರಕ್ಕೆ ಬಿಡುಗಡೆ‌ ಮಾಡಲಾಗುತ್ತಿದೆ.

ರಾಯಬಾಗ ಹಾಗೂ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಜಲಾವೃತವಾಗಿದ್ದು, ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುಡಚಿ-ಉಗಾರ
ಕಲ್ಲೋಳ-ಯಡೂರ ಸೇತುವೆ ಜಲಾವೃತ ಹಾಗೂ ದೂಧಗಂಗಾ, ವೇದಗಂಗಾ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ
ಕಾರದಗಾ-ಬೋಜ, ಭೋಜವಾಡಿ-ಕುನ್ನೂರ, ಜತ್ರಾಟ-ಭೀವಸಿ, ಮಲಿಕವಾಡ-ದತ್ತವಾಡ
ಸಿದ್ನಾಳ-ಅಕ್ಕೋಳ ಸೇತುವೆಗಳು ಜಲಾವೃತವಾಗಿವೆ.

14 ಗ್ರಾಮಗಳ ಸಂಪರ್ಕ ಸೇತುವೆಗಳು ಜಲಾವೃತವಾಗಿದ್ದು, ಸುತ್ತುವರೆದು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿರುವ ಜನ. ನದಿ ತೀರದಲ್ಲಿ ಬೆಳಗಾವಿ ಜಿಲ್ಲಾಡಳಿತದಿಂದ ಕಟ್ಟೆಚ್ಚರ ವಹಿಸಲಾಗಿದ್ದು, ಇನ್ನು ಮೂರು ದಿನ ಮಳೆ ಮುಂದುವರೆಯಲಿರುವುದರಿಂದ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.