ETV Bharat / state

ಮಳೆಗೆ ನಲುಗಿದ ಕುಂದಾನಗರಿ : ರಸ್ತೆ ಸಂಪರ್ಕ ಕಟ್.. ಜಲಾಶಯ ಭರ್ತಿ, ಪ್ರವಾಹ ಭೀತಿ - ನವಿಲುತೀರ್ಥ ಜಲಾಶಯ

ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ನವಿಲುತೀರ್ಥ ಜಲಾಶಯಕ್ಕೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಹೀಗಾಗಿ, ರಾಮದುರ್ಗ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಆರಂಭವಾಗಿದೆ. ನದಿ ತೀರದ ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ..

heavy-rain-throughout-belagavi-district
ಮಳೆಗೆ ನಲುಗಿದ ಕುಂದಾನಗರಿ
author img

By

Published : Jul 23, 2021, 2:42 PM IST

ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಬೆಳಗಾವಿ ತಾಲೂಕಿನ ಬೆನಕನಹಳ್ಳಿ, ಬೆಳಗುಂದಿ, ರಕ್ಕಸಕೊಪ್ಪ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಬೆಳಗಾವಿ ತಾಲೂಕಿನ ಬೆನಕನಹಳ್ಳಿ, ಬೆಳಗುಂದಿ, ರಕ್ಕಸಕೊಪ್ಪ ರಸ್ತೆಗಳು ಸಂಪೂರ್ಣ ‌ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.

ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಅಪಾರ ಪ್ರಮಾಣದ ನೀರನ್ನ ಹೊರಗೆ ಹರಿಸಲಾಗ್ತಿದೆ. ಇದರಿಂದ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಲ್ಲಿರುವ ಕೋಯ್ನಾ ಜಲಾಶಯಕ್ಕೆ ಒಳಹರಿವು ಪ್ರಮಾಣ ಕೂಡ ಅಧಿಕವಾಗಿದೆ. ಹೀಗಾಗಿ, ಇಂದು ಬೆಳಗ್ಗೆ ಕೋಯ್ನಾ ‌ಜಲಾಶಯದಿಂದ 20 ಸಾವಿರ ಕ್ಯೂಸೆಕ್​​​ ನೀರು ಬಿಡುಗಡೆ ಮಾಡಲಾಗಿದೆ.

ಕೋಯ್ನಾ ಜಲಾಶಯದ ಅಧಿಕಾರಿಗಳು ಈ ಸಂಬಂಧ ಬೆಳಗಾವಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ‌ಕೋಯ್ನಾ ಜಲಾಶಯದ 8 ಗೇಟ್ ತೆರೆದು ನೀರು ಬಿಡುಗಡೆ ಮಾಡಲಾಗಿದೆ. ಆರಂಭದಲ್ಲಿ 10 ಸಾವಿರ ಕ್ಯೂಸೆಕ್​​​ ‌ನೀರು ಬಿಡಲಾಗಿದೆ. ಕೆಲ ಹೊತ್ತಿನ ಬಳಿಕ ಅದನ್ನ 20 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ ಆಗ್ತಿದ್ದಂತೆ ಕೃಷ್ಣಾ ನದಿ ತೀರದಲ್ಲಿ ಆತಂಕ ಶುರುವಾಗಿದೆ. ಸಹ್ಯಾದ್ರಿ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಇಳಿಮುಖವಾದರೆ ಇಲ್ಲಿನ ಜನರಲ್ಲಿ ಆತಂಕ ಕಡಿಮೆ ಆಗುತ್ತದೆ. ಇಲ್ಲವಾದರೆ ಈ ವರ್ಷವೂ ಗಡಿ ಜಿಲ್ಲೆ ಜನರು ಪ್ರವಾಹದ‌ ಸಂಕಷ್ಟ ಅನುಭವಿಸಬೇಕಾಗುತ್ತದೆ.

ಪ್ರೌಢಶಾಲೆಯ ಕಟ್ಟಡ ಬಿರುಕು

ಧಾರಾಕಾರ ಮಳೆಯಿಂದಾಗಿ ಖಾನಾಪುರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದೆ. ಲಿಂಗನಮಠ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಕಟ್ಟಡ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಜೊತೆಗೆ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಒಳಹರಿವು ಹೆಚ್ಚಿದ ಕಾರಣ ನವಿಲುತೀರ್ಥ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ‌ ಮಾಡಲಾಗಿದೆ.

ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ನವಿಲುತೀರ್ಥ ಜಲಾಶಯಕ್ಕೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಹೀಗಾಗಿ, ರಾಮದುರ್ಗ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಆರಂಭವಾಗಿದೆ. ನದಿ ತೀರದ ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಇತ್ತ ಮಳೆ ಹೆಚ್ಚಾಗುತ್ತಿದ್ದಂತೆ ನಗರದ ಪರಿಸ್ಥಿತಿ ಅವಲೋಕನಕ್ಕಾಗಿ ಬೆಳಗಾವಿ ದಕ್ಷಿಣ ‌ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಮಳೆಯಲ್ಲೇ ತೊಂದರೆಗೆ ಸಿಲುಕಿರುವ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮಗಳನ್ನು‌ ಕೈಗೊಳ್ಳುತ್ತಿದ್ದಾರೆ. ಕ್ಷೇತ್ರದಲ್ಲಿ ಮಳೆಯಿಂದ ಉಂಟಾಗಿರುವ ಅನಾಹುತಗಳು, ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.