ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆ ಹಲಲವು ಅವಾಂತರಗಳನ್ನು ಸೃಷ್ಟಿಸಿದೆ.
ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿರುವ ಐತಿಹಾಸಿಕ ಕೋಟೆಯ ಒಂದು ಭಾಗ ಮಳೆಯಿಂದ ಕುಸಿದುಬಿದ್ದಿದೆ. ಕೋಟೆ ಕುಸಿಯುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಕಲ್ಲಿನ ಗೋಡೆ ಕುಸಿತದಿಂದ ಕೋಟೆ ಪಕ್ಕದಲ್ಲಿ ವಾಸವಾಗಿರುವ ಜನರಲ್ಲಿ ಆತಂಕ ಮನೆ ಮಾಡಿದೆ. 18ನೇ ಶತಮಾನದಲ್ಲಿ ಜಯಪ್ಪ ದೇಸಾಯಿ ಎಂಬುವರು ಈ ಕೋಟೆಯನ್ನು ಕಟ್ಟಿಸಿದ್ದರು.
ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಈ ಕೋಟೆ ಮಹತ್ವದ ಪಾತ್ರ ನಿರ್ವಹಿಸಿತ್ತು. ಇದೀಗ ಐತಿಹಾಸಿಕ ಕೋಟೆ ಧರೆಗುರುಳುತ್ತಿದ್ದು, ಇದರ ಪುನಶ್ಚೇತನಕ್ಕೆ ಸರ್ಕಾರ ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.