ಅಥಣಿ: ತಾಲೂಕಿನಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದ್ದು, ರೈತರಿಗೆ ಸಾಕಷ್ಟು ನಷ್ಟ ಉಂಟುಮಾಡಿದೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಪಾರ ಪ್ರಮಾಣದ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಅಲ್ಲದೇ ಕೊರೊನಾ ವೈರಸ್ನಿಂದ ಈಗಾಗಲೇ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದ ರೈತನಿಗೆ ಈ ಮಳೆಯಿಂದಾಗಿ ಮತ್ತೆ ಆಘಾತವಾಗಿದೆ.