ETV Bharat / state

ಬೆಳಗಾವಿಯಲ್ಲಿ ವರುಣನ ಆರ್ಭಟ : ಧಾರಾಕಾರ ಮಳೆಗೆ ನದಿಯಂತಾದ ರಾಷ್ಟ್ರೀಯ ಹೆದ್ದಾರಿ! - ಬೆಳಗಾವಿ ಮಳೆ ನ್ಯೂಸ್

ಧಾರಾಕಾರ ಮಳೆ ಹಿನ್ನೆಲೆ ಬೆಳಗಾವಿ ಹೊರವಲಯ ವಂಟಮೂರಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿ 4 ಜಲಾವೃತಗೊಂಡಿದೆ.

heavy water flow on national high way of belagavi
ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತ
author img

By

Published : Jul 22, 2021, 1:41 PM IST

ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಧಾರಾಕಾರ ಮಳೆ-ರಾಷ್ಟ್ರೀಯ ಹೆದ್ದಾರಿ ಜಲಾವೃತ

ಬೆಳಗಾವಿಯ ಹೊರವಲಯ ವಂಟಮೂರಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿ 4 ಜಲಾವೃತಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೇಲೆ ಮಳೆ ನೀರು ಹರಿಯುತ್ತಿದ್ದು, ನದಿಯಂತೆ ಭಾಸವಾಗುತ್ತಿದೆ. ಸಂಚಾರಕ್ಕೆ ಅಡ್ಡಿಯಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೀವಭಯದಲ್ಲೇ ವಾಹನ ಸವಾರರು ಸಂಚಾರ ಮಾಡ್ತಿದ್ದಾರೆ.

ಉಕ್ಕಿ ಹರಿಯುತ್ತಿರುವ ಬಳ್ಳಾರಿ ನಾಲಾ:

ವರುಣನಾರ್ಭಟದ ಹಿನ್ನೆಲೆ, ಬಳ್ಳಾರಿ ನಾಲಾ ಕೂಡ ಉಕ್ಕಿ ಹರಿಯುತ್ತಿದೆ. ಬಳ್ಳಾರಿ ನಾಲಾ ನೀರು ನುಗ್ಗಿ ಯಳ್ಳೂರು ಗ್ರಾಮದ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. ಈ ನಾಲಾ ಹೂಳೆತ್ತದ ಹಿನ್ನೆಲೆ ರೈತರ ಬೆಳೆಗಳು ನೀರುಪಾಲಾಗಿವೆ. ಭತ್ತ, ಮೆಕ್ಕೆಜೋಳ, ಕಬ್ಬಿನ ಗದ್ದೆಗಳು ನದಿಯಂತೆ ಕಂಡುಬರುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.