ಚಿಕ್ಕೋಡಿ: ಕೋವಿಡ್-19 ನಿಯಂತ್ರಿಸಲು ಕರ್ನಾಟಕ - ಮಹಾರಾಷ್ಟ್ರ ಗಡಿಯಲ್ಲಿರುವ ನಿಪ್ಪಾಣಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಸಿಪಿಐ ಸಂತೋಷ ಸತ್ಯನಾಯಿಕ ಅವರ ನೇತೃತ್ವದಲ್ಲಿ ಅನಗತ್ಯವಾಗಿ ಓಡಾಡುವ ಜನರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
ಸರ್ಕಾರದ ಆದೇಶವನ್ನು ಇಂತಹ ಸಮಯದಲ್ಲಿ ಪ್ರತಿಯೊಬ್ಬರೂ ಪಾಲಿಸಬೇಕು. ಸಾರ್ವಜನಿಕರು ಇದಕ್ಕೆ ಸ್ಪಂದಿಸಿದರೆ ಮಾತ್ರ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸಾಧ್ಯ ಎಂದು ಸಿಪಿಐ ತಿಳಿಸಿದರು.
ಕೋವಿಡ್ -19 ತಡೆಗಟ್ಟಲು ನಿಪ್ಪಾಣಿ ಪಟ್ಟಣದಲ್ಲಿ ಆಟೋ-ರಿಕ್ಷಾ ಮೂಲಕ ಧ್ವನಿವರ್ಧಕಗಳನ್ನು ಬಳಸಿ ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಸೋಂಕಿನ
ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ನೀಡಲಾಗುತ್ತಿದೆ.