ಅಥಣಿ (ಬೆಳಗಾವಿ): ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಮಂತ್ರಿಸ್ಥಾನ ನೀಡುವುದಾಗಿ ಹೈಕಮಾಂಡ್ ಹೇಳಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಕಾಗವಾಡ ತಾಲೂಕಿನ ಕೇಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ತಪ್ಪಿದೆ. ಹಾಗಾಗಿ, ಈ ಬಾರಿ ಮಂತ್ರಿಸ್ಥಾನ ನೀಡಲಾಗುವುದೆಂದು ಹೈಕಮಾಂಡ್ ಹೇಳಿದೆ.
ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಮರಳುತ್ತಾರೆ ಎಂಬುದೆಲ್ಲಾ ಊಹಾಪೋಹ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಮಾಡಿದರೂ ನಾನು ಬಿಜೆಪಿ ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ. ಸದ್ಯದ್ರಲ್ಲೇ ರಾಜ್ಯ ಸರ್ಕಾರ ಬಜೆಟ್ ಮಂಡಿಸಲಿರುವುದರಿಂದ ಕ್ಷೇತ್ರದಲ್ಲಿ ಬಸವೇಶ್ವರ ನೀರಾವರಿ ಯೋಜನೆ ಹಣ ಮಂಜೂರು, ಕೆರೆ ತುಂಬಿಸುವ ಯೋಜನೆಗೆ ಸಿಎಂ ಹಣ ಬಿಡುಗಡೆ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.
ಇದನ್ನೂ ಓದಿ: ನಾ ಮನೆಯಲ್ಲಿ ರಾಜಕೀಯ ಮಾಡಲ್ಲ : ಮೇಕೆದಾಟು ಅಭಿವೃದ್ಧಿ ಸಂಬಂಧ ಆನಂದ್ ಸಿಂಗ್ ಜತೆ ಮಾತನಾಡಿದ್ದೇನೆ : ಡಿಕೆಶಿ
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಂಪರ್ಕದಲ್ಲಿರುವ ವಿಚಾರ ನನಗೆ ಗೊತ್ತಿಲ್ಲ. ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಇತ್ತೀಚೆಗೆ ವಲಸಿಗರು ಜಾತ್ರೆ ಮುಗಿಸಿಕೊಂಡು ಹೋಗುತ್ತಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪಾಟೀಲ್, ವಲಸಿಗರು ಬಿಜೆಪಿ ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ