ETV Bharat / state

ಕೊಗನೊಳ್ಳಿ ಚೆಕ್ ಪೋಸ್ಟ್‌ಗೆ ಗೃಹ ಸಚಿವರ ಭೇಟಿ: ಅಕ್ರಮ ಪ್ರವೇಶ ತಡೆಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಬಳಿ ಇರುವ ಅಂತರರಾಜ್ಯ ಚೆಕ್ ಪೋಸ್ಟ್‌ಗೆ ಭೇಟಿ ನೀಡಿದ ಸಚಿವ ಬೊಮ್ಮಾಯಿ ಬಳಿಕ ಅಧಿಕಾರಿಗಳ ಜತೆ ಸಭೆ ನಡೆಸಿದರು.

home minister bommayi
ಕುಗನೊಳ್ಳಿ ಚೆಕ್ ಪೋಸ್ಟ್‌ಗೆ ಗೃಹ ಸಚಿವ ಭೇಟಿ
author img

By

Published : May 30, 2020, 8:04 PM IST

ಚಿಕ್ಕೋಡಿ: ಕೋವಿಡ್ ನಿಯಂತ್ರಣದಲ್ಲಿ ಗಡಿಭಾಗದ ಕೊಗನೊಳ್ಳಿ ಚೆಕ್ ಪೋಸ್ಟ್ ಪಾತ್ರ ಪ್ರಮುಖವಾಗಿದೆ. ಸೇವಾ ಸಿಂಧು ಮೂಲಕ ಇ - ಪಾಸ್ ಪಡೆದುಕೊಂಡು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುವ ಮೂಲಕ ಅತ್ಯುತ್ತಮ ಕೆಲಸ ಮಾಡಲಾಗುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಪೊಲೀಸರ ಶ್ರಮ ಕೊಂಡಾಡಿದರು.

ಕುಗನೊಳ್ಳಿ ಚೆಕ್ ಪೋಸ್ಟ್‌ಗೆ ಗೃಹ ಸಚಿವ ಭೇಟಿ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಬಳಿ ಇರುವ ಅಂತರರಾಜ್ಯ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಹೆಚ್ಚು ಕೊರೊನಾ ಸೋಂಕು ಕಂಡು ಬಂದಿದೆ. ಇದು ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡುವುದನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರ, ಎಲ್ಲರನ್ನೂ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು ಎಂದು ಗೃಹ ಸಚಿವರು ಪೊಲೀಸ್​ ಸಿಬ್ಬಂದಿಗೆ ಸೂಚಿಸಿದರು.

ಕಳೆದ ವಾರದಿಂದ ಇ-ಪಾಸ್ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಕಾರ್ಯ ನಿರ್ವಹಿಸಲಾಗುವುದು. ಜಿಲ್ಲಾಡಳಿತ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲರೂ ಹಗಲಿರುಳು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂತರರಾಜ್ಯ ಗಡಿಯ ಚೆಕ್ ಪೋಸ್ಟ್‌ನಲ್ಲಿ ಕೆಲಸ ಮಾಡುತ್ತಿರುವವರು ಯಾವುದೇ ಒತ್ತಡಕ್ಕೆ ಮಣಿಯದೇ ಕಾರ್ಯನಿರ್ವಹಿಸಬೇಕು. ಪೊಲೀಸ್, ಆರೋಗ್ಯ ಇಲಾಖೆ ಸೇರಿದಂತೆ ಕೊರೊನಾ ವಾರಿಯರ್ಸ್‌ಗಳಿಗೂ ಸೋಂಕು ಕಂಡುಬರುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಸೂಚನೆ ಕೊಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.