ETV Bharat / state

ಮನೆ ಗೋಡೆ ಕುಸಿದು ವ್ಯಕ್ತಿ ಸಾವು: ಪರಿಹಾರ ನೀಡುವುದಾಗಿ ತಹಶೀಲ್ದಾರ ಭರವಸೆ - ತಹಶೀಲ್ದಾರ ಶುಭಾಸ ಸಂಪಗಾಂವಿ ಭರವಸೆ

ಮಹಾ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಚಿಕ್ಕೋಡಿ ತಹಶೀಲ್ದಾರ್​ ಶುಭಾಸ ಸಂಪಗಾವಿ ಭರವಸೆ ನೀಡಿದ್ದಾರೆ.

Chikkodi
ಗೋಡೆ ಕುಸಿದು ವ್ಯಕ್ತಿ ಸಾವು: ಸ್ಥಳಕ್ಕೆ ತಹಶೀಲ್ದಾರ ಭೇಟಿ
author img

By

Published : Aug 19, 2020, 10:45 AM IST

ಚಿಕ್ಕೋಡಿ: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮಹಾ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಗೋಡೆ ಕುಸಿದು ವ್ಯಕ್ತಿ ಸಾವು: ಸ್ಥಳಕ್ಕೆ ತಹಶೀಲ್ದಾರ್​ ಭೇಟಿ, ಪರಿಶೀಲನೆ

ಮೃತ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಚಿಕ್ಕೋಡಿ ತಹಶೀಲ್ದಾರ್​ ಶುಭಾಸ ಸಂಪಗಾವಿ ಭರವಸೆ ನೀಡಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಮಹಾ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲೇ ಕಲ್ಲಪ್ಪ ಪರಗೌಡರ (70) ಎಂಬುವವರು ಬೆಳಗಿನ ಜಾವ 4 ಗಂಟೆಗೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಧಾವಿಸಿದ ಚಿಕ್ಕೋಡಿ ತಹಶೀಲ್ದಾರ್​ ಶುಭಾಸ ಸಂಪಗಾವಿ ಘಟನೆಯ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಿನ‌ ಜಾವ ಈ ಘಟನೆ ನಡೆದಿದೆ. ಅಪಾರ ಮಳೆಯಿಂದ ಮನೆ ಗೋಡೆ ಹಾನಿಯಾಗಿದೆ. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.