ಬೆಳಗಾವಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ, ಜೋರು ಗಾಳಿಗೆ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಜ್ಜಿ- ಮೊಮ್ಮಗ ಮೃತಪಟ್ಟಿರುವ ಘಟನೆ ಇಟಗಿ ಗ್ರಾಮದಲ್ಲಿ ನಡೆದಿದೆ.
ಖಾನಾಪುರ ತಾಲೂಕಿನ ಇಟಗಿ ಗ್ರಾಮದ ದೊಡ್ಡವ್ವ ಪಟ್ಟೇದ (55), ಮೊಮ್ಮಗ ಅಭಿಷೇಕ ಪಟ್ಟೇದ (3) ಮೃತರು. ನಿನ್ನೆ ರಾತ್ರಿಯಿಂದ ಗ್ರಾಮದಲ್ಲಿ ಸುರಿದ ಜೋರುಗಾಳಿ, ಮಳೆಗೆ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ದೊಡ್ಡವ್ವರ ಮಗನಾದ ಸುರೇಶ್ ಮತ್ತು ಸೊಸೆ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಕೊರೊನಾ ಕಾಲದಲ್ಲಿ ವಯೋವೃದ್ಧರ ಪಾಲಿಗೆ ಸಂಜೀವಿನಿಯಾದ ಚಿರಾಯು ವೈದ್ಯರ ತಂಡ