ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆಗೆ ಗೌರವ ಡಾಕ್ಟರೇಟ್ ಆಫ್ ಸೈನ್ಸ್ ಪದವಿ ಘೋಷಣೆ ಮಾಡಲಾಗಿದೆ. ಅಮೆರಿಕದ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ ಎಂದು ಕೆಎಲ್‌ಇ ರಿಸರ್ಚ್ ಸೆಂಟರ್ನ ನಿರ್ದೇಶಕ ಡಾ. ಶಿವಪ್ರಸಾದ್ ಗೌಡರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮೆರಿಕದ ಫಿಲಾಡೆಲ್ಸಿಯಾದ ಪ್ರತಿಷ್ಠಿತ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯದಿಂದ ಡಾ. ಪ್ರಭಾಕರ ಕೋರೆ ಅವರ ಶಿಕ್ಷಣ, ಆರೋಗ್ಯ, ವೈದ್ಯಕೀಯ ಸಂಶೋಧನೆಗಳಿಗೆ ಅಂತಾರಾಷ್ಟ್ರೀಯ ಸಹಯೋಗಗಳನ್ನು ನೋಡಿ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಣೆ ಮಾಡಲಾಗಿದೆ. ಮೇ 25 ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದರು.
ಬಳಿಕ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯದ ಗ್ಲೋಬಲ್ ಆಫೆರ್ಸ್ ಮುಖ್ಯಸ್ಥ ಡಾ. ರಿಚರ್ಡ್ ಡರ್ಮನ್ ಮಾತನಾಡಿ, ಡಾ. ಪ್ರಭಾಕರ ಕೋರೆ ಅವರಿಗೆ ಡಾಕ್ಟರೇಟ್ ಪದವಿಯನ್ನು ಕೇವಲ ಅವರು ಕುಲಪತಿ ಆಗಿರೋದಕ್ಕೆ ನೀಡುತ್ತಿಲ್ಲ. ಪ್ರಭಾಕರ ಕೋರೆ ಅವರು ಸಂಶೋಧನೆಯಲ್ಲಿ ತೋರಿದ ಒಲವು ಅವರಿಗೆ ಈ ಪದವಿ ಪಡೆಯಲು ಸಹಾಯವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ರಂಜಾನ್ ಪ್ರಯುಕ್ತ ಕುವೆಂಪು ವಿವಿಯ ಎಲ್ಲ ಸ್ನಾತಕ ಪರೀಕ್ಷೆಗಳ ಮುಂದೂಡಿಕೆ