ETV Bharat / state

ಇಸ್ರೋ ಅಧ್ಯಕ್ಷ ಡಾ. ಕೆ.ಶಿವನ್​​ಗೆ ವಿಟಿಯುನಿಂದ ಗೌರವ ಡಾಕ್ಟರೇಟ್​​​​​​​​ - ಫೆಬ್ರವರಿ 8 ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 19 ನೇ ಘಟಿಕೋತ್ಸವ

ಫೆಬ್ರವರಿ 8ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ನಡೆಯಲಿದ್ದು, ಇಸ್ರೋ ಅಧ್ಯಕ್ಷ ಡಾ. ಕೆ.ಶಿವನ್​​ಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗುವುದು ಎಂದು ಕುಲಪತಿ ಪ್ರೊ. ಕರಿಸಿದ್ದಪ್ಪ ತಿಳಿಸಿದ್ದಾರೆ.

honorary Doctorate of ISRO President Dr.K.Sivan
ಇಸ್ರೋ ಅಧ್ಯಕ್ಷ ಡಾ. ಕೆ.ಶಿವನ್​​ಗೆ ವಿಟಿಯುನಿಂದ ಗೌರವ ಡಾಕ್ಟರೇಟ್​​​​​​​​
author img

By

Published : Feb 1, 2020, 8:21 PM IST

Updated : Feb 1, 2020, 8:38 PM IST

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಫೆಬ್ರವರಿ 8ರಂದು ನಡೆಯಲಿದ್ದು, ಇಸ್ರೋ ಅಧ್ಯಕ್ಷ ಡಾ. ಕೆ.ಶಿವನ್ ಅವರಿಗೆ ಗೌರವ ಡಾಕ್ಟರ್ ಆಫ್ ಸೈನ್ಸ್ ಪದವಿ ಪ್ರದಾನ ಮಾಡಲಿದ್ದೇವೆ ಎಂದು ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕರಿಸಿದ್ದಪ್ಪ ತಿಳಿಸಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 19ನೇ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ. ಕೆ.ಕೆ.ಅಗರವಾಲ್ ಹಾಗೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್​​ ನಾರಾಯಣ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕುಲಪತಿ ಪ್ರೊ. ಕರಿಸಿದ್ದಪ್ಪ ಸುದ್ದಿಗೋಷ್ಠಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಬಿಇ ವಿಭಾಗದಲ್ಲಿ 58,827, ಬಿ.ಆರ್ಕ್ ವಿಭಾಗದಲ್ಲಿ 744, ಎಂಬಿಎ ವಿಭಾಗದಲ್ಲಿ 4,606, ಎಂಸಿಎ ವಿಭಾಗದಲ್ಲಿ 1,325, ಎಂ.ಟೆಕ್ ವಿಭಾಗದಲ್ಲಿ 1582, ಎಂ.ಆರ್ಕ್ ವಿಭಾಗದಲ್ಲಿ 39, ಪಿಹೆಚ್​​ಡಿ ವಿಭಾಗದಲ್ಲಿ 479 ಹಾಗೂ ಎಂಎಸ್ಸಿ ವಿಭಾಗದಲ್ಲಿ 21 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವು ಎಂದರು.

ಮಂಗಳೂರಿನ ಮನಿಶಾ ರಾವ್‍ಗೆ 13 ಚಿನ್ನದ ಪದಕ:

ಮಂಗಳೂರಿನ ಸೆಂಟ್ ಜೋಸೆಪ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿನಿ ಮನಿಶಾ ರಾವ್ 13 ಚಿನ್ನದ ಪದಕ ಪಡೆದುಕೊಂಡಿದ್ದಾರೆ ಹಾಗೂ ಮೂಡಬಿದರೆಯ ಮಂಗಳೂರು ಇನ್​​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸನ್ಮತಿ ಪಾಟೀಲ್ 11 ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

19ನೇ ಘಟಿಕೋತ್ಸವದ ನಿಮಿತ್ತ ಆಗಮಿಸುವ ವಿದ್ಯಾರ್ಥಿಗಳು, ಪಾಲಕರು ಹಾಗೂ ಆಹ್ವಾನಿತರಿಗಾಗಿ ಫೆಬ್ರವರಿ 8ರಂದು ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಚೆನ್ನಮ್ಮ ವೃತ್ತದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Last Updated : Feb 1, 2020, 8:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.