ಚಿಕ್ಕೋಡಿ : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆ, ಆರೋಗ್ಯ ಅಭಿಯಾನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೂರಗುತ್ತಿಗೆ ನೌಕರರು ಕುಡಚಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೈಗೆ ಕಪ್ಪು ರಿಬ್ಬನ್ ಕಟ್ಟಿಕೊಂಡು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುಮಾರು ಹದಿನೈದು ವರ್ಷಗಳಿಂದ ಎನ್‌ಎಚ್ಎಂ ಯೋಜನೆಯಡಿ ಆರೋಗ್ಯ ಅಭಿಯಾನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೂರಗುತ್ತಿಗೆ ನೌಕರರಾಗಿ ಅತಿ ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದೇವೆ ಹಾಗೂ ಕೋವಿಡ್ -19ನಂತಹ ಮಹಾಮಾರಿ ವಿರುದ್ಧ ಹೋರಾಡುತ್ತಿದ್ದೇವೆ. ಆದರೆ, ನಮಗೆ ಯಾವುದೇ ಸೇವಾ ಭದ್ರತೆ ಇಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಕೂಡ ಇಲ್ಲವಾದ್ದರಿಂದ ಸರ್ಕಾರ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹ ಮಾಡಿದರು.
ಆರೋಗ್ಯ ಬಜೆಟ್ನಲ್ಲಿ ಪ್ರತ್ಯೇಕ ಹಣ ಮೀಸಲಿಡಬೇಕು ಹಾಗೂ ಇತರೆ ಹತ್ತು ಹಲವು ಬೇಡಿಕೆಗಳ ಈಡೇರಿಕೆಗಾಗಿ ಸದ್ಯ ಮೇ 12ರಿಂದ 22ರವರೆಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕರ್ತವ್ಯ ನಿರತ ಸ್ಥಳದಲ್ಲಿಯೇ ಸೇವೆಗೂ ಬದ್ಧ, ಮುಷ್ಕರಕ್ಕೂ ಸಿದ್ಧ ಎಂಬ ಘೋಷ ವಾಕ್ಯದೂಂದಿಗೆ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.