ETV Bharat / state

ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮನೆ ಕುಸಿತ; ಮಹಿಳೆಗೆ ಗಂಭೀರ ಗಾಯ, ನಾಲ್ಕು ವಾಹನಗಳು ಜಖಂ - heavy rain in balgavi

ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಹಿಂಬದಿ ಮನೆ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿ ವಾಸವಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ನಾಲ್ಕು ವಾಹನಗಳು ಜಖಂ ಆಗಿವೆ.

KN_BGM_02_08_Mane_Kusit_KA10029
ಮಳೆಗೆ ಮನೆ ಕುಸಿತ
author img

By

Published : Aug 8, 2022, 5:15 PM IST

ಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿವ ಭಾರಿ ಮಳೆಯಿಂದಾಗಿ ಮನೆಯೊಂದು ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ತಾಲೂಕಿನ ವಡಗಾಂವಿ ಪ್ರದೇಶದಲ್ಲಿ ನಡೆದಿದೆ.

ವಡಗಾವಿಯ ಭಾರತ ನಗರದ ಎಡರನೇ ಕ್ರಾಸ್​ನಲ್ಲಿ ಆನಂದ ಕಲ್ಲಪ್ಪ ಬಿರ್ಜೆ ಎಂಬುವವರಿಗೆ ಸೇರಿದ ಮನೆ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ನೆಲಸಮವಾಗಿದೆ. ಮನೆಯಲ್ಲಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಸಂಜೆಯಷ್ಟೇ ಮನೆಯಲ್ಲಿದ್ದ ಏಳು ಜನ ಕುಟುಂಬ ಸದಸ್ಯರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿತ್ತು.

ಮನೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಒಮ್ನಿ ವಾಹನಗಳ ಮೇಲೆ ಮನೆಯ ಗೋಡೆ ಕುಸಿದ ಪರಿಣಾಮ ವಾಹನಗಳು ಸಂಪೂರ್ಣ ಜಖಂ ಆಗಿದ್ದು, ಹಿಂಬದಿಯ ಮೆನೆಯ ಮೇಲೂ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಶಾಂತಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಧಾರಾಕಾರ ಮಳೆಗೆ ಭತ್ತದ ಗದ್ದೆಯಲ್ಲಿ ಭೂ ಕುಸಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.