ಬೆಳಗಾವಿ : ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸ್ಫೋಟಕ ವಸ್ತು ಪತ್ತೆಯಾದ ಬೆನ್ನಲ್ಲೆ ರಾಜ್ಯದ ವಿವಿಧ ರೇಲ್ವೆ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನದಿಂದಲೇ ರೈಲ್ವೆ ಪೊಲೀಸರು ಹಾಗೂ ಶ್ವಾನ ದಳದ ಸಿಬ್ಬಂದಿ ನಿಲ್ದಾಣದಲ್ಲಿದ್ದ ಪ್ರಯಾಣಿಕರ ಬ್ಯಾಗ್, ರೈಲ್ವೆ ಹಳಿ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಪರಿಶೀಲನೆ ಕಾರ್ಯ ನಡೆಸಿದರು. ಇನ್ನು ಹುಬ್ಬಳ್ಳಿ ರೆಲ್ವೆ ನಿಲ್ದಾಣದಲ್ಲಿ ಸ್ಪೋಟಗೊಂಡ ಸುದ್ದಿ ವ್ಯಾಪಕವಾಗಿ ಹರಿದಾಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿತ್ತು.
ಈ ಘಟನೆ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ರೆಲ್ವೆ ಪೊಲೀಸರು ಹಾಗೂ ಸಿಬ್ಬಂದಿ ಮಾಡಿದರು. ಜೊತೆಗೆ ಜಿಲ್ಲೆಯ ವಿವಿಧ ರೇಲ್ವೆ ನಿಲ್ದಾಣಗಳಲ್ಲಿ ತೀವ್ರ ನಿಗಾವಹಿಸಿರುವ ಪೊಲೀಸರು ಪ್ರತಿಯೊಬ್ಬ ವ್ಯಕ್ತಿ ಹಾಗೂ ಬ್ಯಾಗ್ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.