ಬೆಳಗಾವಿ: ಹುಬ್ಬಳ್ಳಿ ದೇಶದ್ರೋಹ ಘೋಷಣೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬೆಳಗಾವಿ ವೈದ್ಯಕೀಯ ಕಾಲೇಜಿಗೆ ಕರೆತಂದಿದ್ದು, ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಆರೋಪಿಗಳಾದ ಅಮೀರ್, ಬಸಿತ್, ತಾಲಿಬ್ನನ್ನು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಬೆಳಗಾವಿ ವೈದ್ಯಕೀಯ ಕಾಲೇಜಿಗೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಇದಾದ ನಂತರ ಮೂವರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಕರೆದೊಯ್ಯಲಿದ್ದಾರೆ.
ವಿಚಾರಣೆಗಾಗಿ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.