ಚಿಕ್ಕೋಡಿ (ಬೆಳಗಾವಿ): ಹುಕ್ಕೇರಿ ತಾಲೂಕನ್ನು ಒಂದು ವಾರ ಕಾಲ ಲಾಕ್ಡೌನ್ ಮಾಡುವಂತೆ ಶಾಸಕ ಉಮೇಶ್ ಕತ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾತ್ತಿರುವ ಹಿನ್ನೆಲೆ ಶಾಸಕ ಉಮೇಶ್ ಕತ್ತಿ ಅಧಿಕಾರಿಗಳೊಂದಿಗೆ ಇಂದು ತುರ್ತು ಸಭೆ ನಡೆಸಿ ಚರ್ಚಿಸಿದರು.
ಸಭೆಯ ಬಳಿಕ ಸೋಮವಾರದರಿಂದ ಒಂದು ವಾರದ ಕಾಲ ಹುಕ್ಕೇರಿ ತಾಲೂಕು ಸಂಪೂರ್ಣ ಲಾಕ್ಡೌನ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.