ಚಿಕ್ಕೋಡಿ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ.
ಯುವತಿಯ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಹಾಗೂ ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ.