ETV Bharat / state

ಸುವರ್ಣಸೌಧ ಬಳಿ ಸಾರಿಗೆ ನೌಕರರ ಅಹೋರಾತ್ರಿ ಧರಣಿ: ಮಹಿಳೆ ಅಸ್ವಸ್ಥ, ಪ್ರತಿಭಟನಾ ಸ್ಥಳದಲ್ಲಿ ಕರೆಂಟ್ ಕಟ್

author img

By

Published : Dec 21, 2022, 7:08 AM IST

ಸಾರಿಗೆ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸುವರ್ಣಸೌಧದ ಬಸ್ತವಾಡ ಬಳಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

Etv Bharat
ಸಾರಿಗೆ ನೌಕರರ ಅಹೋರಾತ್ರಿ ಧರಣಿ
ಸಾರಿಗೆ ನೌಕರರ ಅಹೋರಾತ್ರಿ ಧರಣಿ

ಬೆಳಗಾವಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸುವರ್ಣಸೌಧದ ಬಸ್ತವಾಡ ಬಳಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಬೆಂಗಳೂರು ಸಾರಿಗೆ ಘಟಕ-20ರ ನಿರ್ವಾಹಕಿ ಜಯಶ್ರೀ ಎಂಬ ಮಹಿಳೆ ಕಳೆದ ಎರಡು ದಿನಗಳಿಂದ ಉಪವಾಸ ಕೈಗೊಂಡಿದ್ದ ಹಿನ್ನೆಲೆ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಿದ್ದು, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಚಿವರು ಬಂದು ಹೋದ ಮೇಲೆ ಕರೆಂಟ್ ಕಟ್: ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ಸ್ಥಳದಲ್ಲಿ ವಿದ್ಯುತ್ ಬೆಳಕು ಸ್ಥಗಿತಗೊಂಡಿದ್ದು, ಪ್ರತಿಭಟನೆಕಾರರು ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಾರಿಗೆ ಇಲಾಖೆ ನೌಕರರು ಬೆಳಗಾವಿ ನಗರದ ಸುವರ್ಣ ವಿಧಾನಸೌಧದ ಎದುರು ಬಸ್ತವಾಡ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ಸಚಿವ ಶ್ರೀರಾಮುಲು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರ ಅಹವಾಲು ಸ್ವೀಕರಿಸಿ, ಮಾತುಕತೆ ನಡೆಸಿದರು.

ಆದರೆ ಸಚಿವರು ಮತ್ತು ಪ್ರತಿಭಟನಾಕಾರರ ನಡುವೆ ಸಂಧಾನ ವಿಫಲವಾದ ಹಿನ್ನೆಲೆ ಸಾರಿಗೆ ನೌಕರರು ಪ್ರತಿಭಟನೆ ಮುಂದುವರಿಸಿದರು. ಸಂಧಾನ ವಿಫಲವಾಗುತ್ತಿದ್ದಂತೆ ಪ್ರತಿಭಟನೆ ಸ್ಥಳದಲ್ಲಿ ವಿದ್ಯುತ್ ಹಾಗೂ ನೀರಿನ ಸೌಲಭ್ಯವನ್ನು ಅಧಿಕಾರಿಗಳು ಕಟ್ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಬಿಜೆಪಿ ಬಿಟ್ಟು ಹೋಗುವ ಯೋಚನೆ ಮಾಡಲ್ಲ : ಸಚಿವ ಶ್ರೀರಾಮುಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.