ಬೆಳಗಾವಿ: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ನೋಡೋಣ ನಿರೀಕ್ಷೆ ಮಾಡೋಣ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗ ಅಸೆಂಬ್ಲಿಯಲ್ಲಿದ್ದು ಸಕ್ರಿಯ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಸ್ಥಾನ ಕೊಡೋದು ಬಿಡೋದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಅವರು ಏನು ಮಾಡ್ತಾರೆ ಎಂಬುದನ್ನು ಕಾದು ನೋಡೋಣ ಎಂದರು.
ನಮ್ಮ ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಡಿ.ಕೆ ಶಿವಕುಮಾರ ಅವರು ಕ್ರಿಯಾಶೀಲರಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.