ಬೆಳಗಾವಿ: ಟಿಕೆಟ್ ಕೈ ತಪ್ಪಿದ್ದಕ್ಕೆ ನನಗೆ ಯಾವುದೇ ಬೇಸರವಿಲ್ಲ ಎಂದು ರಮೇಶ್ ಕತ್ತಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೈತಪ್ಪಿರೋದಕ್ಕೆ ಯಾವುದೇ ಅಸಮಾಧಾನ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕರು. ಯಡಿಯೂರಪ್ಪ ಇಲ್ಲಿಗೆ ಸಂಧಾನ ಮಾಡಲು ಬಂದಿಲ್ಲ. ಪಕ್ಷದ ಅಭ್ಯರ್ಥಿ ಗೆಲುವಿಗೆ ಸಿದ್ಧ ಮಾಡಲು ಬಂದಿದ್ದಾರೆ ಎಂದು ತಿಳಿಸಿದರು.
ನಾನು ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಟಿಕೆಟ್ ಕೈತಪ್ಪಿದ್ದರಿಂದ ನಿರಾಸೆಯಾಗಿಲ್ಲ. ಹೈಕಮಾಂಡ್ ನಡೆ ಕಾರ್ಯಕರ್ತರಲ್ಲಿ ನೋವು ತಂದಿದೆ. ಇದು ಸ್ವಾಭಾವಿಕ ಕೂಡ. ಇದನ್ನು ಬಿಜೆಪಿ ಪಕ್ಷ ಸರಿಪಡಿಸಲಿದೆ. ಬಿಜೆಪಿ ವಿರುದ್ಧ ಬಂಡಾಯ ಏಳುವ ಪ್ರಶ್ನೆಯೆ ಇಲ್ಲ ಎಂದು ರಮೇಶ ಕತ್ತಿ ಸ್ಪಷ್ಟನೆ ನೀಡಿದರು.