ETV Bharat / state

ಚುನಾವಣೆಯಲ್ಲಿ ಸೋತರೂ ಜನರ ಜೊತೆಯೇ ಇರುತ್ತೇನೆ: ಸತೀಶ್ ಜಾರಕಿಹೊಳಿ

ಚುನಾವಣೆಯ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ಯೋಜನೆ ಇತ್ತು. ಹೀಗಾಗಿ, ಇಂದು ಸವದತ್ತಿ ತಾಲೂಕಿನ 5 ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪ್ರತಿ ಬಾರಿ 5 ಗ್ರಾಮಗಳಿಗೆ ಭೇಟಿ ನೀಡಿ, ಜನರಿಗೆ ಧನ್ಯವಾದ ಸಲ್ಲಿಸಲಿದ್ದೇನೆ..

sathish jarkiholi
ಸತೀಶ್ ಜಾರಕಿಹೊಳಿ
author img

By

Published : Jul 6, 2021, 4:54 PM IST

ಬೆಳಗಾವಿ : ಜಿಲ್ಲೆಯ ಯಾವುದೇ ಗ್ರಾಮಗಳ ಜನರ ಸಮಸ್ಯೆಯಿದ್ದರೂ ನಿಮ್ಮ ನೆರವಿಗೆ ನಾವಿದ್ದೇವೆ. ಚುನಾವಣೆಯಲ್ಲಿ ಸೋತರೂ ಕೂಡ ನಿಮ್ಮ ಸಹಕಾರಕ್ಕೆ ನಾನು ಸದಾ ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸವದತ್ತಿ ತಾಲೂಕಿನ ಮಾಡಮಗೇರಿ, ಯರಝರ್ವಿ, ಕಡಬಿ, ತಲ್ಲೂರ ಮತ್ತು ಯರಗಟ್ಟಿ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಇಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

sathish jarkiholi
ಅಹವಾಲು ಸ್ವೀಕಾರ ಕಾರ್ಯಕ್ರಮ

ಚುನಾವಣೆಯ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ಯೋಜನೆ ಇತ್ತು. ಹೀಗಾಗಿ, ಇಂದು ಸವದತ್ತಿ ತಾಲೂಕಿನ 5 ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪ್ರತಿ ಬಾರಿ 5 ಗ್ರಾಮಗಳಿಗೆ ಭೇಟಿ ನೀಡಿ, ಜನರಿಗೆ ಧನ್ಯವಾದ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

sathish jarkiholi
ಸತೀಶ್ ಜಾರಕಿಹೊಳಿ

ಜನರು ತಮ್ಮ ಯಾವುದೇ ಸಮಸ್ಯೆಯಿದ್ದರೂ ನೇರವಾಗಿ ನಮ್ಮನ್ನು ಗೋಕಾಕ್ ಅಥವಾ ಬೆಳಗಾವಿಯಲ್ಲಿ ಭೇಟಿಯಾಗಬಹುದು. ತಮ್ಮ ಗ್ರಾಮಗಳ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಿದ್ದರೆ, ನಿಮ್ಮೊಂದಿಗೆ ನಾನು ಕೂಡ ಬರುತ್ತೇನೆ. ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಕೈಜೋಡಿಸುತ್ತೇನೆ ಎಂದು ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.