ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ ಸಂಸದರ ಸಭೆ ಕರೆದಿದ್ದು, ನಾನು ಸಭೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆ ನಿನ್ನೆಯಷ್ಟೇ ನಾನು ಬೆಂಗಳೂರಿನಿಂದ ಬೆಳಗಾವಿಗೆ ಮರಳಿದ್ದೇನೆ. ನಾನು ಅಲ್ಲಿಂದ ಹೊರಟ ನಂತರವೇ ಸಭೆ ನಿಗದಿ ಆಗಿದೆ. ಇಂದು ಡಿಸಿಸಿ ಬ್ಯಾಂಕ್ ಬೋರ್ಡ್ ಸಭೆಯಿದೆ. ಡಿಸಿಸಿ ಬ್ಯಾಂಕ್ ಬೋರ್ಡ್ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ ಸಿಎಂ ಕರೆದ ಸಭೆಯಲ್ಲಿ ಪಾಲ್ಗೊಳ್ಳಲು ಆಗಲ್ಲ. ಡಿಸಿಎಂ ಲಕ್ಷ್ಮಣ ಸವದಿ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ನಾನು ಸಭೆಯಲ್ಲಿ ಪಾಲ್ಗೊಳ್ಳಬೇಕಿದ್ದು, ಸಭೆಗೆ ಬರುವುದಿಲ್ಲ ಎಂದು ಸಿಎಂ ಗಮನಕ್ಕೆ ತಂದಿದ್ದೇನೆ ಎಂದರು.
ಸಚಿವ ಸಂಪುಟ ಪುನರ್ ರಚನೆ ವೇಳೆ ಸಚಿವೆ ಜೊಲ್ಲೆ ಅವರನ್ನು ಕೈಬಿಡುತ್ತಾರೆ ಎಂಬುವುದು ಊಹಾಪೋಹ. ಈ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ವರದಿ ಆಗುತ್ತಿದೆ. ನಮಗೆ ಈವರೆಗೆ ವರಿಷ್ಠರಿಂದ ಮಾಹಿತಿ ಬಂದಿಲ್ಲ. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿ ಅವಧಿ ಪೂರ್ಣಗೊಳಿಸಲಿದ್ದಾರೆ. ಸಿಎಂ ಬದಲಾವಣೆಯೂ ಊಹಾಪೋಹವಷ್ಟೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ವಿಜಯನಗರ ಜಿಲ್ಲೆಗೆ 6 ತಾಲೂಕು ಸೇರ್ಪಡೆ:ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಳಗಾವಿಯಲ್ಲಿ ಡಿಸೆಂಬರ್ 5 ರಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಸೇರಿ ಹಲವು ರಾಷ್ಟ್ರ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದರು.