ಚಿಕ್ಕೋಡಿ: ನಾನು ಪ್ರವಾಸದಲ್ಲಿದ್ದೆ, ನನಗೆ ಸಚಿವರ ಖಾತೆ ಹಂಚಿಕೆಯ ಗೊಂದಲ ಹಾಗೂ ಸಚಿವರ ರಾಜೀನಾಮೆ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ಮಾತನಾಡಬಾರದು, ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಓದಿ: ಕೃಷಿ ಕಾಯ್ದೆ ವಿರೋಧಿಸಿ ನಾಳೆ ಬೆಳಗಾವಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ: ಬಾಬಾಗೌಡ ಪಾಟೀಲ
ಪಟ್ಟಣದಲ್ಲಿ ಮಾತನಾಡಿದ ಅವರು, ನಾಳೆ ನಡೆಯಲಿರುವ ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ. ಯಾಕೆಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೋಸ್ಕರ ಒಳ್ಳೆಯ ನಿರ್ಣಯ ತೆಗೆದುಕೊಂಡಿವೆ. ರೈತರು ತಾವು ಬೆಳೆದ ಬೆಳೆಗಳನ್ನು ತಮಗಿಷ್ಟ ಬಂದ ಸ್ಥಳಗಳಲ್ಲಿ ಮಾರಾಟ ಮಾಡುವ ಅವಕಾಶ ಈ ಕಾಯ್ದೆಯಲ್ಲಿದೆ. ಇದು ರೈತ ವಿರೋಧಿ ಕಾಯ್ದೆಯಲ್ಲ, ರೈತರ ಪರವಾದ ಕಾಯ್ದೆಯಾಗಿದೆ. ನಿಜವಾದ ರೈತರಿಗೆ ಅಸಮಾಧಾನವಿಲ್ಲ ಎಂದರು.