ETV Bharat / state

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಸಿಎಂಗೆ ಮನವಿ ಮಾಡುತ್ತೇನೆ; ಅಥಣಿ ಶಾಸಕ - CM BSY news

ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣಪತ್ರ ನೀಡುವಂತೆ ಹಾಗೂ ಕಳೆದ ಎರಡು ವರ್ಷಗಳಿಂದ ಲಿಂಗಾಯತ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ನಡೆಯುತ್ತಿರುವ ಹೋರಾಟದ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಕಾಗುತ್ತದೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಭರವಸೆ ನೀಡಿದ್ದಾರೆ.

I will also discussing for panchamasali society reservation; Mahesh Kumathalli
ಶಾಸಕ ಮಹೇಶ್ ಕುಮಟಳ್ಳಿ
author img

By

Published : Nov 4, 2020, 9:43 PM IST

ಅಥಣಿ: ಪಂಚಮಸಾಲಿ ಸಮಾಜದಕ್ಕೆ 2ಎ ಮೀಸಲಾತಿ ನೀಡಬೇಕೆಂಬ ಕೂಡಲಸಂಗಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಬೇಡಿಕೆಗಳನ್ನು ನಾನು ಕೂಡ ಸಿಎಂಗೆ ಸರ್ಕಾರದಿಂದ ಸಿಗಬೇಕಾದ ಮೀಸಲಾತಿ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಈಟಿವಿ ಭಾರತಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯೆ ನೀಡಿದರು.

ಅಥಣಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಕಮರಿ, ಹಾಲಳ್ಳಿ, ಶಿರಹಟ್ಟಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದಿಂದ ಸಮಾಜಕ್ಕೆ ಸಿಗಬೇಕಾದ ಮೀಸಲಾತಿ ಕೇಳುವುದು ಜನಸಾಮಾನ್ಯರ ಹಕ್ಕು. ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣಪತ್ರ ನೀಡುವಂತೆ ಹಾಗೂ ಕಳೆದ ಎರಡು ವರ್ಷಗಳಿಂದ ಲಿಂಗಾಯತ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ನಡೆಯುತ್ತಿರುವ ಹೋರಾಟದ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುತ್ತದೆ. ಅಲ್ಲದೇ ಈ ಬಗ್ಗೆ ವಿಶೇಷವಾಗಿ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಶಾಸಕ ಮಹೇಶ್ ಕುಮಟಳ್ಳಿ

ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಉಪವಾಸ ಸತ್ಯಾಗ್ರಹದಲ್ಲಿ ನಾನು ಭಾಗಿ ಆಗಲು ಸಾಧ್ಯವಾಗಲಿಲ್ಲ. ಕೊರೊನಾ ವೈರಸ್ ಸೋಂಕಿನಿಂದ ನಾನು ಆಸ್ಪತ್ರೆಯಲ್ಲಿ ಇದ್ದುದರಿಂದ ಬರುವುದಕ್ಕೆ ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.